HomeGadag Newsಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿ ಮನೆ ಚಲೋ

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿ ಮನೆ ಚಲೋ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮುಖ್ಯಮಂತ್ರಿ ಮನೆ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಶೈಕ್ಷಣಿಕ ಸಹಾಯಧನ ಕಡಿತ ಮಾಡಿರುವ ಆದೇಶ ಹಿಂಪಡೆಯಬೇಕು. 2021ರ ಅಧಿಸೂಚನೆಯನ್ವಯ ಶೈಕ್ಷಣಿಕ ಧನಸಹಾಯ ಬಿಡುಗಡೆ ಮಾಡಬೇಕು. ನೈಜ ಕಾರ್ಮಿಕರ ನೋಂದಣಿ ಮತ್ತು ಮರುನೋಂದಣಿ ಅರ್ಜಿಗಳನ್ನು ಸಕಾರಣವಿಲ್ಲದೆ ತಿರಸ್ಕರಿಸುವುದನ್ನು ನಿಲ್ಲಿಸಬೇಕು. ಸೌಲಭ್ಯಗಳಿಗಾಗಿ ಸಲ್ಲಿಸಿರುವ ಅರ್ಜಿಗಳ ವಿಲೇವಾರಿ ಮಾಡಬೇಕು. ತಾಂತ್ರಿಕ ನೋಂದಣಿಗಳು ಹಾಗೂ ಸರ್ವರಸ್ ಸಮಸ್ಯೆ ಪರಿಹರಿಸಬೇಕು. ಬಾಕಿ ಇರುವ ಸೆಸ್ ಸಂಗ್ರಹ ಮಾಡಿ ಬೃಹತ್ ಖಾಸಗಿ ಹಾಗೂ ಸಾರ್ವಜನಿಕ ನಿರ್ಮಾಣಗಳಿಗೆ ಶೇ 2ರಷ್ಟು ಸೆಸ್ ವಿಧಿಸಬೇಕು ಇವೇ ಮುಂತಾದ ಬೇಡಿಕೆಗಳನ್ನು ಈಡೇರಿಸಬೇಕೆಂದು ಕಟ್ಟಡ ಕಾರ್ಮಿಕರ ಸಂಘಟನೆಗಳ ಸಮನ್ವಯ ಸಮಿತಿ ಒತ್ತಾಯಿಸಿದೆ.

ಅಗಸ್ಟ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು ಕಾರ್ಮಿಕ ಮುಖಂಡರಾದ ಮಾರುತಿ ಚಿಟಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮುತ್ತಪ್ಪ ಚಲವಾದಿ, ಹನಮಂತಪ್ಪ ಮಾದರ, ಹನಮಂತಪ್ಪ ಮಲ್ಲಾಡದ, ಮಹಾಂತೇಶ ಮೇಗಲಮನಿ, ಬಸವರಾಜ ಗಂಗಮ್ಮನವರ, ಮಂಜುಳಾ ಮಾದರ, ಮಂಜುನಾಥ, ಹನಮಂತ ಕೊಡಬಾಳ, ಗಾಳೆಪ್ಪ ಹೊಸಮನಿ, ಕನಕಪ್ಪ ಹಾದಿಮನಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!