ಕಲಾಹಬ್ಬ 22ನೇ ಚಿತ್ರಸಂತೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

0
Spread the love

ಬೆಂಗಳೂರು:- ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಕಲಾಹಬ್ಬ 22ನೇ ಚಿತ್ರಸಂತೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

Advertisement

ಈ ಬಾರಿ ಹೆಣ್ಣು ಮಗುವಿಗೆ ಚಿತ್ರಸಂತೆ ಸಮರ್ಪಿಸಲಾಗಿದೆ. ಚಿತ್ರಕಲಾ ಪರಿಷತ್‌ನ ಪ್ರವೇಶ ದ್ವಾರದಲ್ಲಿ 35 ಅಡಿ ಎತ್ತರದ ಕಲಾಕೃತಿ ನಿರ್ಮಿಸಲಾಗಿದೆ. ಬೆಳಗ್ಗೆ 6 ಕ್ಕೆ ಆರಂಭವಾಗಿರುವ ಚಿತ್ರಸಂತೆ ರಾತ್ರಿ 9 ರವರೆಗೂ ನಡೆಯಲಿದ್ದು, ಪ್ರತಿ ಬಾರಿಯಂತೆ ಈ ಬಾರಿಯೂ ಸಾವಿರಾರು ಕಲಾವಿದರು ತಮ್ಮ ಕಲಾ ಪ್ರತಿಭೆಯನ್ನು ಅರಳಿಸಿದ್ದಾರೆ.

ಬೇರೆ ಬೇರೆಯ ರಾಜ್ಯಗಳ ಮೂರೂವರೆ ಸಾವಿರಕ್ಕೂ ಹೆಚ್ಚು ಕಲಾವಿದರು ಚಿತ್ರಸಂತೆಯಲ್ಲಿ ಪಾಲ್ಗೊಂಡಿದ್ದಾರೆ. ಪೆನ್ಸಿಲ್ ಸ್ಕೆಚ್‌ನಿಂದ ಹಿಡಿದು ತೈಲವರ್ಣ, ಜಲವರ್ಣ, ಆಕ್ರೋಲಿಕ್, ಮೈಸೂರು ಶೈಲಿ, ರಾಜಸ್ಥಾನಿ ಶೈಲಿ, ಆಕ್ರೋಲಿಕ್, ಪಾರಂಪರಿಕ, ಆಧುನಿಕ ಪ್ರಕಾರಗಳ ಕಲಾಕೃತಿಗಳನ್ನು ಪ್ರದರ್ಶನಕ್ಕಿಡಲಾಗಿದೆ. ಕನಿಷ್ಟ 100 ರೂ.ನಿಂದ ಮೂರ್ನಾಲ್ಕು ಲಕ್ಷ ರೂ. ವರೆಗೂ ಕಲಾಕೃತಿಗಳನ್ನು ಮಾರಾಟ ಮಾಡಲಾಗ್ತಿದೆ.


Spread the love

LEAVE A REPLY

Please enter your comment!
Please enter your name here