ಬೆಂಗಳೂರು: 2026 ನೇ ಮಾರ್ಚ್ 18 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿಗಳು ಸದನದಲ್ಲಿ ಶುಭಾಶಯ ಕೋರಿದರು.
ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದ್ದು, ಮೂರು ಹಂತದಲ್ಲಿ ಪರೀಕ್ಷೆಗಳು ನಡೆಯುತ್ತವೆ. ಒಂದು ವೇಳೆ ಮೊದಲ ಹಂತದ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾಗ್ಯೂ ಎರಡನೇ ಹಂತ,
ಮೂರನೇ ಹಂತದಲ್ಲಿ ಪರೀಕ್ಷೆಗೆ ಅವಕಾಶ ಇರುವುದರಿಂದ ಯಾವುದೇ ವಿದ್ಯಾರ್ಥಿಗಳು ಆತಂಕಗೊಳ್ಳದೆ ಪರೀಕ್ಷೆಯನ್ನು ಎದುರಿಸುವಂತೆ ತಿಳಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಧೈರ್ಯವಾಗಿ ಪರೀಕ್ಷೆ ಬರೆಯಲು ತಿಳಿಸಿದರು.



