HomeKarnataka Newsಪೊಲೀಸ್ ಅಧಿಕಾರಿಗಳನ್ನು ಹರಕೆಯ ಕುರಿ ಮಾಡಿ ತಪ್ಪಿಸಿಕೊಳ್ಳುವ ಷಡ್ಯಂತ್ರ ಮುಖ್ಯಮಂತ್ರಿಗಳದು: ಬಿ.ವೈ ವಿಜಯೇಂದ್ರ

ಪೊಲೀಸ್ ಅಧಿಕಾರಿಗಳನ್ನು ಹರಕೆಯ ಕುರಿ ಮಾಡಿ ತಪ್ಪಿಸಿಕೊಳ್ಳುವ ಷಡ್ಯಂತ್ರ ಮುಖ್ಯಮಂತ್ರಿಗಳದು: ಬಿ.ವೈ ವಿಜಯೇಂದ್ರ

For Dai;y Updates Join Our whatsapp Group

Spread the love

ಬೆಂಗಳೂರು: ಪೊಲೀಸ್ ಅಧಿಕಾರಿಗಳನ್ನು ಹರಕೆಯ ಕುರಿ ಮಾಡಿ ತಪ್ಪಿಸಿಕೊಳ್ಳುವ ಷಡ್ಯಂತ್ರ ಮುಖ್ಯಮಂತ್ರಿಗಳದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,

ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದೀರಿ. ವೈಫಲ್ಯಕ್ಕಾಗಿ ಬೇಹುಗಾರಿಕಾ ದಳದ ಅಧಿಕಾರಿಗಳನ್ನು ಯಾಕೆ ಅಮಾನತು ಮಾಡಿಲ್ಲ? ಎಂದು ಕೇಳಿದರು. ಬೇಹುಗಾರಿಕಾ ದಳ ನೇರ ಸಿಎಂ ಕೆಳಗಡೆ ಬರುತ್ತದೆ, ಅವರನ್ನು ಅಮಾನತು ಮಾಡಿದ್ರೆ ಇದು ಮುಖ್ಯಮಂತ್ರಿಗಳ ಬುಡಕ್ಕೇ ಬರಲಿದೆ. ಆದ್ದರಿಂದ ಅವರನ್ನ ಅಮಾನತು ಮಾಡಿಲ್ಲ ಎಂದು ವಿಜಯೇಂದ್ರ ತಿಳಿಸಿದರು.

ನಾವು 30-40 ಸಾವಿರ ಜನರು ಬರುವ ನಿರೀಕ್ಷೆ ಇಟ್ಟುಕೊಂಡಿದ್ದೆವು. 2 ರಿಂದ 3 ಲಕ್ಷ ಜನರು ಬಂದಿದ್ದಾರೆ, ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎನ್ನುವ ಮೂಲಕ ಬೇಹುಗಾರಿಕಾ ದಳದ ವೈಫಲ್ಯವನ್ನು ಸ್ವತಃ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಪೊಲೀಸ್ ಇಲಾಖೆ ಸಂಭ್ರಮಾಚರಣೆಗೆ ಅನುಮತಿ ಕೊಟ್ಟಿರಲಿಲ್ಲ. ಲಕ್ಷ ಲಕ್ಷ ಜನರು ಬರುವುದು ಗೊತ್ತಿದ್ದು ಹೀಗೆ ಹೇಳಿದ್ದಾರೆ. ಹಾಗಿದ್ದರೆ ರಾಜ್ಯ ಸರಕಾರಕ್ಕೆ ಯಾರು ಅನುಮತಿ ಕೊಟ್ಟರು ಎಂದು ಪ್ರಶ್ನಿಸಿದರು. ವಿಧಾನಸೌಧದ ಬಳಿ ಲಕ್ಷ ಲಕ್ಷ ಜನ ಆರ್‌ಸಿಬಿ ಅಭಿಮಾನಿಗಳು ಬಂದಿದ್ದರು. ಅವರಿಗೆ ಯಾರ ಅನುಮತಿ ಇತ್ತು ಎಂದು ಕೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!