ವೀರೇಂದ್ರ ಮರಿಬಸಣ್ಣನವರರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

0
Chief Minister's Gold Medal to Virendra Maribasanna
Spread the love

ವಿಜಯಸಾಕ್ಷಿ ಸುದ್ದಿ, ಡಂಬಳ : ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ವೀರೇಂದ್ರ ಸೋಮಶೇಖರ್ ಮರಿಬಸಣ್ಣನವರ ಅವರಿಗೆ 2023ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಣೆಯಾಗಿದೆ. ಅರಣ್ಯ ಇಲಾಖೆಯ ವನ್ಯಜೀವಿಗಳ ಸಂರಕ್ಷಣೆ ವಿಭಾಗದಲ್ಲಿ ವೀರೇಂದ್ರ ಅವರು ಮಾಡಿರುವ ಸಾಧನೆಗಾಗಿ ಈ ಪದಕ ಘೋಷಣೆ ಆಗಿದೆ.

Advertisement

ಬೆಂಗಳೂರಿನಲ್ಲಿ ಶೀಘ್ರದಲ್ಲೇ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಪದಕ ಪ್ರದಾನ ಮಾಡಲಿದ್ದಾರೆ. ಅರಣ್ಯ ಸಂರಕ್ಷಣೆ, ಅಕ್ರಮ ಕಡಿತಲೆ ತಡೆಗಟ್ಟುವಿಕೆ, ವನ್ಯಜೀವಿ ಸಂರಕ್ಷಣೆ, ಸಂಶೋಧನೆ, ಅರಣ್ಯ ಪ್ರದೇಶವನ್ನು ಒತ್ತುವರಿದಾರರಿಂದ ತೆರವುಗೊಳಿಸುವುದು, ನೆಡುತೋಪು ಬೆಳಸುವಂತಹ ಸಾಧನೆ, ಅಭಿವೃದ್ಧಿ ಕಾರ್ಯಗಳು, ಮಾನವ-ಪ್ರಾಣಿ ಸಂಘರ್ಷ ಹಾಗೂ ಇತರೆ ನವೀನ ಆಲೋಚನೆಗಳ ಮೂಲಕ ಗಣನೀಯ ಸಾಧನೆ ಮಾಡಿದ ವಲಯ ಅರಣ್ಯ ಇಲಾಖೆಯ ಅಧಿಕಾರಿ ವೀರೇಂದ್ರ ಮರಿಬಸಣ್ಣನವರ ಅವರಿಗೆ ಚಿನ್ನದ ಪದಕ ನೀಡಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here