ಚಿಕ್ಕಬಳ್ಳಾಪುರ:– ಮಾರಕಾಸ್ತ್ರದಿಂದ ಕೊಚ್ಚಿ ಜೆಸಿಬಿ ಮಾಲೀಕನನ್ನು ಬರ್ಬರವಾಗಿ ಕೊಲೆಗೈದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಶ್ವಿನಿ ಬಡಾವಣೆಯಲ್ಲಿ ಜರುಗಿದೆ.
Advertisement
48 ವರ್ಷದ ರಾಮಸ್ವಾಮಿ ಕೊಲೆಯಾದ ದುರ್ದೈವಿ. ಮೃತ ರಾಮಸ್ವಾಮಿ, ಜೆಸಿಬಿ, ಟಿಪ್ಪರ್ ಗಳನ್ನು ಹೊಂದಿದ್ದ ಎನ್ನಲಾಗಿದೆ. ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿರಬೇಕಾದರೆ ಅಡ್ಡಗಟ್ಟಿ ಲಾಂಗ್ ನಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಆತನ ಬಳಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಿಂದಲೇ ಕೊಲೆ ಶಂಕೆ ವ್ಯಕ್ತವಾಗಿದೆ.
ಕೂಡಲೇ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದ್ದಾರೆ.