ಚಿಕ್ಕಮಗಳೂರು:- 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ (22) ಮೃತ ವಿದ್ಯಾರ್ಥಿನಿ. ದಿಶಾ, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಇಂದು ಬೆಳಗ್ಗೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು, ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ.
ರಾಜ್ಯದಲ್ಲಿ ಹೃದಯಾಘಾತದ ಸಾವಿನ ಪ್ರಮಾಣ ಮುಂದುವರಿದಿದೆ. ಎಳೆ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ. ಇದು ಹೆಚ್ಚು ಆತಂಕ ಮೂಡಿಸಿದೆ.



