ಚಿಕ್ಕಮಗಳೂರು:- ಬಾಳೆಹೊನ್ನೂರಿನ ಜೇನುಗದ್ದೆ ಸಮೀಪದ ಪುರ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಜರುಗಿದೆ.
Advertisement
ಗಣಪತಿ ಗಾಯಗೊಂಡ ಕಾರ್ಮಿಕ. ಆನೆ ದಾಳಿಯಿಂದ ಕಾರ್ಮಿಕ ಪ್ರಜ್ಞೆ ಕಳೆದುಕೊಂಡಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಎಡಗೈ ಮಾತ್ರ ನಡುಗುತ್ತಿದ್ದು, ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಶಿವಮೊಗ್ಗಕ್ಕೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ. ಬದುಕಿರುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.


