ಚಿಕ್ಕೋಡಿ: ಕರ್ನಾಟಕದ ಹಲವೆಡೆ ಇಂದು ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ. ಅದಲ್ಲದೆ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಬೆಳಗಾವಿ ಲೋಕಾಯುಕ್ತ ಎಸ್ಪಿ ಹಣಮಂತರಾಯ ನೇತೃತ್ವದಲ್ಲಿ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
Advertisement
ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚೀನ ಮಂಡೇದ, ಹಾಗೂ ರಾಯಬಾಗ ತಾಲೂಕಿನ ಹಾರುಗೇರಿ ಪಟ್ಟಣದ ನಿವಾಸಿ ಪಶುವೈದ್ಯ ಸಂಜಯ ದುರ್ಗನ್ನವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಬೆಳಗಾವಿಯ ಅನಿಗೋಳ, ರಾಯಭಾಗ ತಾಲೂಕಿನ ಹಾರೂಗೇರಿ, ಹುಕ್ಕೆರಿ ತಾಲೂಕಿನ ಬೆಲ್ಲದ ಬಾಗೇವಾಡಿ ಸೇರಿ ಮೂರು ಕಡೆಗಳಲ್ಲಿ ಲೋಕಾಯುಕ್ತ ಸಿಪಿಐ ನಿರಂಜನ್ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಸದ್ಯ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.