ಪಹಲ್ಗಾಮ್ ದಾಳಿ, ಸುಹಾಸ್ ಹತ್ಯೆ ಖಂಡಿಸಿ ನಾಳೆ ಚಿಕ್ಕಮಗಳೂರು ಬಂದ್!?

0
Spread the love

ಚಿಕ್ಕಮಗಳೂರು:- ಇತ್ತೀಚೆಗೆ ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಹಿಂದುಗಳ ಮೇಲೆ ದಾಳಿ ನಡೆಸಿ ಸುಮಾರು 28 ಮಂದಿಯನ್ನು ಗುಂಡಿಕ್ಕಿ ಕೊಂದಿದ್ದರು. ಈ ಘಟನೆ ಬೆನ್ನಲ್ಲೇ ದೇಶದೆಲ್ಲೆಡೆ ಆಕ್ರೋಶ ಭುಗಿಲೆದ್ದಿದೆ.

Advertisement

ಈ ಘಟನೆ ಮಾಸುವ ಮುನ್ನವೇ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಇದು ಹಿಂದೂ ಮುಖಂಡರನ್ನು ಕೆರಳಿಸಿದ್ದು, ನಾಳೆ ಚಿಕ್ಕಮಗಳೂರು ಬಂದ್ ಗೆ ಕರೆ ಕೊಟ್ಟಿದೆ. ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನಾಳೆ ಬಂದ್​ಗೆ ಕರೆ ನೀಡಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಚಿಕ್ಕಮಗಳೂರು ನಗರ ಸೇರಿದಂತೆ 9 ತಾಲೂಕಿನಲ್ಲಿ ಬಂದ್​ ಮಾಡಲು ನಿರ್ಧರಿಸಲಾಗಿದೆ. ಸ್ವಯಂ ಘೋಷಿತರಾಗಿ ಅಂಗಡಿ ಮುಂಗಟ್ಟು ಬಂದ್​ ಮಾಡುವಂತೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಭಜರಂಗದಳ ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿ ರಂಗನಾಥ್, ಪಾಕಿಸ್ತಾನದ ಮುಸ್ಲಿಂರು ಹಿಂದೂಗಳನ್ನ ಹತ್ಯೆ ಮಾಡುತ್ತಿದ್ದಾರೆ. ಭಜರಂಗದಳದ ಕಾರ್ಯಕರ್ತರನ್ನ ಗುರಿಯಾಗಿಸಿ ಹತ್ಯೆ ಮಾಡುತ್ತಿದ್ದಾರೆ. ಇದನ್ನ ಖಂಡಿಸಿ ನಾವು ಚಿಕ್ಕಮಗಳೂರು ಬಂದ್ ಕರೆ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಸರ್ಕಾರಿ ಬಸ್ ಸೇರಿದಂತೆ ಸಾರಿಗೆ ಸಂಚಾರಕ್ಕೆ ಯಾವುದೇ ಅಡ್ಡಿ ಮಾಡುವುದಿಲ್ಲ. ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು, ಹೋಟೆಲ್ ಬಂದ್ ಮಾಡಲು ಮನವಿ ಮಾಡಿರುವುದಾಗಿ ರಂಗನಾಥ್​ ಅವರು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here