HomeGadag Newsಸರ್ಕಾರಿ ಶಾಲೆಗಳ ಮಕ್ಕಳು ಬದುಕನ್ನು ಅರಿತವರು

ಸರ್ಕಾರಿ ಶಾಲೆಗಳ ಮಕ್ಕಳು ಬದುಕನ್ನು ಅರಿತವರು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದ ಮಕ್ಕಳು ಬದುಕನ್ನು ಅರಿತವರು. ಇಂತಹ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರದ ಉಚಿತ ಯೋಜನೆಗಳು ಅನುಷ್ಠಾನಗೊಂಡಿದ್ದು, ಇವುಗಳೊಂದಿಗೆ ಸಂಘ-ಸಂಸ್ಥೆಗಳು ಕೈಜೋಡಿಸಿ ಮಕ್ಕಳ ಉತ್ತಮ ಭವಿಷ್ಯಕ್ಕೆ ಸಹಕರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ. ಶೆಟ್ಟೆಪ್ಪನವರ ಹೇಳಿದರು.

ಅವರು ಮಂಗಳವಾರ ಗದುಗಿನ ಸರ್ಕಾರಿ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆ ನಂ.2ರಲ್ಲಿ ಇನ್ನರ್‌ವ್ಹೀಲ್ ಕ್ಲಬ್ ಗದಗ-ಬೆಟಗೇರಿ ವತಿಯಿಂದ 2025-2026ನೇ ಸಾಲಿಗೆ ಗದಗ ಶಹರದ ಸರ್ಕಾರಿ ಶಾಲೆಗಳ ದತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗದಗ-ಬೆಟಗೇರಿ ಇನ್ನರ್‌ವ್ಹೀಲ್ ಕ್ಲಬ್ ಸಾಮಾಜಿಕವಾಗಿ ಬತಮತ್ತು ಶೈಕ್ಷಣಿಕವಾಗಿ ಹಲವಾರು ರಚನಾತ್ಮಕ ಕಾರ್ಯಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿದ್ದು, ಬಡ ಹಾಗೂ ಪ್ರತಿಭಾನ್ವಿತ ಮಕ್ಕಳನ್ನು ದತ್ತು ಪಡೆದು ಅವರ ಶೈಕ್ಷಣಿಕ ಅಭಿವೃದ್ಧಿಗೆ ಕೈಜೋಡಿಸುತ್ತಿರುವುದು ಅಭಿನಂದನೀಯ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಂಪನ್ಮೂಲ ವ್ಯಕ್ತಿ ಮೊಹಮ್ಮದ್‌ಶಫಿ ಯರಗುಡಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳಿಗೆ ಮೌಲ್ಯ ಶಿಕ್ಷಣದ ಅವಶ್ಯಕತೆಯಿದ್ದು, ವಿದ್ಯಾರ್ಥಿಗಳು ನ್ಯಾಯ, ನೀತಿ, ಮಾನವೀಯತೆ, ಆದರ್ಶ, ಸಹಕಾರ ಮನೋಭಾವನೆಗಳನ್ನು ಹೊಂದುವಲ್ಲಿ ಶಿಕ್ಷಣ ಇಲಾಖೆಯೊಂದಿಗೆ ಸಂಘ-ಸಂಸ್ಥೆಗಳು ಜೊತೆಗೂಡಿ ಮಕ್ಕಳಿಗೆ ಮೌಲ್ಯ ಶಿಕ್ಷಣವನ್ನು ನೀಡಬೇಕಿದೆ ಎಂದರು.

ಪ್ರಾಸ್ತಾವಿಕವಾಗಿ ಸಂಪನ್ಮೂಲ ವ್ಯಕ್ತಿ ಕವಿತಾ ಬೇಲೇರಿ ಮಾತನಾಡಿ, ಸರ್ಕಾರಿ ಶಾಲೆಗಳ ಫಲಿತಾಂಶ, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ, ಗುಣಾತ್ಮಕ ಶಿಕ್ಷಣ, ಫಲಪ್ರದವಾದ ಕಲಿಕೆ ಏರಿಕೆಯಾಗಿದ್ದು, ಇಲಾಖೆಯೊಂದಿಗೆ ಸಂಘ-ಸಂಸ್ಥೆಗಳು ಕೈಜೋಡಿಸಿ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಮುಂದಾಗಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯೆ ಎಫ್.ಜೆ. ದಲಭಂಜನ ಮಾತನಾಡಿ, ಮಕ್ಕಳ ಗುಣಮಟ್ಟದ ಕಲಿಕೆ, ಶೈಕ್ಷಣಿಕ ಅಭಿವೃದ್ಧಿಯೇ ನಮ್ಮ ಧ್ಯೇಯವಾಗಿದ್ದು, ದಾನಿಗಳು, ಸಂಘ-ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಸಹಾಯ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಕ್ಲಬ್‌ನ ಖಜಾಂಚಿ ಪುಷ್ಪಾ ಭಂಡಾರಿ ಪ್ರಾರ್ಥಿಸಿದರು. ಎಡಿಟರ್ ವೀಣಾ ಕಾವೇರಿ ಸ್ವಾಗತಿಸಿದರು. ಎಚ್.ಬಿ. ಬಂಡಿವಡ್ಡರ ನಿರೂಪಿಸಿದರು. ಕೊನೆಯಲ್ಲಿ ಕ್ಲಬ್‌ನ ಸಿ.ಪಿ.ಸಿ.ಸಿ ಮೀನಾಕ್ಷಿ ಕೊರವಣ್ಣವರ ವಂದಿಸಿದರು. ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಲ್ಪಾ ಅಕ್ಕಿ, ವಿ.ಕೆ. ಪಾಟೀಲ, ವಿದ್ಯಾ ಕಬ್ಬರಗಿ, ಇಂದಿರಾಬಾಯಿ, ಸಿ.ಎಸ್. ನಾಗನೂರ, ಗೌರಮ್ಮ ಉಪಸ್ಥಿತರಿದ್ದರು.

ಇನ್ನರ್‌ವ್ಹೀಲ್ ಕ್ಲಬ್ ಗದಗ-ಬೆಟಗೇರಿ ಅಧ್ಯಕ್ಷೆ ಅಶ್ವಿನಿ ಜಗತಾಪ ಮಾತನಾಡಿ, ಬೇಟಿ ಬಚಾವೋ-ಬೇಟಿ ಪಡಾವೋ ಎಂಬ ಧ್ಯೇಯದೊಂದಿಗೆ ಹೆಣ್ಣು ಮಗುವಿನ ಶೈಕ್ಷಣಿಕ ಬೆಳವಣಿಗೆಗೆ ಪ್ರೋತ್ಸಾಹ ನೀಡುವುದಕ್ಕಾಗಿ ಈ ಶಾಲೆಯನ್ನು ದತ್ತು ಪಡೆಯಲಾಗಿದೆ. ಮಕ್ಕಳಿಗೆ ವಿವಿಧ ಚಟುವಟಿಕೆ ಹಾಗೂ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಗುವುದು. ಶಾಲೆಯ ಅಗತ್ಯತೆಗಳನ್ನು ಪೂರೈಸಲು ಪ್ರಯತ್ನಿಸಲಾಗುತ್ತಿದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!