ಬೆಂಗಳೂರು:- ಕಳೆದ ಒಂದು ವಾರದಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಚಳಿ ಶುರುವಾಗಿದೆ.
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಚಳಿ ಹೆಚ್ಚಾಗಿದೆ.
ಇನ್ನೂ ವಿಜಯಪುರದಲ್ಲಿ 10.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಂದಿನ ಐದು ದಿನಗಳ ಕಾಲ ನಗರದಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ 26-27ರಿಂದ ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ. ಶುಷ್ಕ ವಾತಾವರಣವಿರಲಿದ್ದು, ಬೆಳಗ್ಗೆ, ರಾತ್ರಿ ಮಂಜು ಕವಿದ ವಾತಾವರಣವಿರಲಿದೆ.