ಬೆಂಗಳೂರು:- ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ವಿದ್ಯುತ್ ಸಂಪರ್ಕವನ್ನು ಬೆಸ್ಕಾಂ ಕಟ್ ಮಾಡಿದೆ. ಈ ಮೂಲಕ ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಶಾಕ್ ನೀಡಿದೆ. ಜೂನ್. 4 ರಂದು ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಸಾವನ್ನಪ್ಪಿದರು. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ.
ಅಗ್ನಿಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಟಾನಗೊಳಿಸದ ಹಿನ್ನಲೆ, ರಾಜ್ಯ ಅಗ್ನಿಶಾಮಕದಳದ ಪೋಲಿಸ್ ಮಹಾ ನಿರ್ದೇಶಕರಿಂದ ಕೆಎಸ್‌ಸಿಎದ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಬೆಸ್ಕಾಂ ಎಂಡಿಗೆ ಪತ್ರ ಬರೆಯಲಾಗಿದೆ. ಹೀಗಾಗಿ ಬೆಸ್ಕಾಂನಿಂದ ಚಿನ್ನಸ್ವಾಮಿ ಕ್ರೀಡಾಂಗಣದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ ಅಂತಾ ಬೆಸ್ಕಾಂನ ಎಕ್ಸ್ ಕ್ಯೂಟಿವ್ ಇಂಜಿನಿಯರ್ ಮಾಹಿತಿ ನೀಡಿದ್ದಾರೆ. ಸದ್ಯ ಜನರೇಟರ್‌ನ್ನು ಚಿನ್ನಸ್ವಾಮಿ ಕ್ರೀಡಾಂಗಣದ ಕಟ್ಟಡಕ್ಕೆ ಬಳಸಲಾಗುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂಗೆ ಇನ್ಮುಂದೆ ವಿದ್ಯುತ್ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತಗೊಳಿಸಿದೆ.