HomeBengaluru Newsಚಿನ್ನಸ್ವಾಮಿ ಕಾಲ್ತುಳಿತ ಕೇಸ್: ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದ ಡಿಎನ್‌ಎ!

ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದ ಡಿಎನ್‌ಎ!

For Dai;y Updates Join Our whatsapp Group

Spread the love

ಬೆಂಗಳೂರು:- ಜೂ.4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಸುಮಾರು 11 ಮಂದಿ ಸಾವನ್ನಪ್ಪಿದ್ದರು. ಈ ಘಟನೆ ಬೆನ್ನಲ್ಲೇ ಆರ್ ಸಿಬಿ ಮ್ಯಾನೇಜ್ಮೆಂಟ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಇನ್ನೂ ಘಟನೆಗೆ ಕಾರಣ ಯಾರು ಎಂಬ ಚರ್ಚೆ ಇಂದಿಗೂ ನಿಂತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೀತಾನೆ ಇದೆ. ಈ ಹೊತ್ತಲ್ಲೇ ಕಾಲ್ತುಳಿತ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಆರ್‌ಸಿಬಿಯ ಕಾರ್ಯಕ್ರಮ ನಿರ್ವಹಣೆ ಮಾಡಿದ್ದ ಡಿಎನ್‌ಎ ಸಂಸ್ಥೆ ಹೈಕೋರ್ಟ್‌ಗೆ ಹೇಳಿದೆ.

ಕಾಲ್ತುಳಿತಕ್ಕೆ ಸಂಬಂಧಿಸಿದ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಹಾಗೂ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಸಂಸ್ಥೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿವೆ. ಇದರಲ್ಲಿ ಸರ್ಕಾರದ ವಿರುದ್ಧವೇ ಗಂಭೀರ ಆರೋಪ ಮಾಡಲಾಗಿದೆ. ಕಾಲ್ತುಳಿತ ಸಂಭವಿಸಲು ಸರ್ಕಾರವೇ ಕಾರಣ ಎಂದು ನೇರವಾಗಿ ದೂರಲಾಗಿದೆ. ಈ ಹಿಂದೆ ಭಾರತ ಟಿ-20 ವಿಶ್ವಕಪ್ ಗೆದ್ದಾಗ ಮುಂಬೈನಲ್ಲಿ ವಿಕ್ಟರಿ ಪರೇಡ್ ನಡೆಸಲಾಗಿತ್ತು. 3 ಲಕ್ಷ ಜನರಿದ್ದರೂ ಯಾವುದೇ ಅವಘಡಗಳಾಗಿರಲಿಲ್ಲ. ವಾಂಖೇಡೆ ಸ್ಟೇಡಿಯಂ ಸಾಮರ್ಥ್ಯ 32,000 ಇದ್ದರೂ ಸಮಸ್ಯೆ ಆಗಲಿಲ್ಲ. ಜೂ.3 ರಂದೇ ಆರ್‌ಸಿಬಿ ವಿಕ್ಟರಿ ಪರೇಡ್‌ಗೆ ಅನುಮತಿ ಕೋರಿ ಪತ್ರವನ್ನು ಬರೆಯಲಾಗಿತ್ತು. ಆದರೆ ತೆರೆದ ಬಸ್ ಪರೇಡ್‌ಗೆ ಪೊಲೀಸರು ಅನುಮತಿ ನಿರಾಕರಣೆ ಮಾಡಿದ್ದರು. ವಿಧಾನಸೌಧ ಕಾರ್ಯಕ್ರಮಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಸ್ಟೇಡಿಯಂ ಬಳಿ ಅಗತ್ಯವಿದ್ದಷ್ಟು ಪೊಲೀಸರು ನಿಯೋಜನೆ ಮಾಡದ ಕಾರಣ ಡಿಎನ್‌ಎನಿಂದಲೇ 584 ಖಾಸಗಿ ಸಿಬ್ಬಂದಿ ನೇಮಕ ಮಾಡಲಾಗಿತ್ತು. ಸರ್ಕಾರ ತನ್ನ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಬಂಧನಕ್ಕೆ ಆದೇಶಿಸಿದೆ.

ಘಟನೆ ದಿನ ಪೊಲೀಸರಿಗೆ 2,450 ಆಹಾರ ಪೊಟ್ಟಣ ಸಿದ್ದಪಡಿಸಲಾಗಿತ್ತು. ಆದರೆ ಪೊಲೀಸರು ಕಡಿಮೆ ಸಂಖ್ಯೆಯಲ್ಲಿದ್ದ ಕಾರಣ ಮಧ್ಯಾಹ್ನ 600 ಮಂದಿ ಮಾತ್ರ ಆಹಾರ ಪೊಟ್ಟಣ ಸ್ವೀಕರಿಸಿದ್ದರು. ರಾತ್ರಿ ಭೋಜನಕ್ಕೆ ಮಾತ್ರ 2,450 ಆಹಾರ ಪೊಟ್ಟಣ ಸ್ವೀಕರಿಸಿದ್ದರು. ಮಧ್ಯಾಹ್ನ 3:30ಕ್ಕೆ ಗೇಟ್ ತೆರೆದ ಬಳಿಕವೂ ಅಭಿಮಾನಿಗಳ ದಟ್ಟಣೆ ಹೆಚ್ಚಿತ್ತು. ಬಳಿಕ ಬಂದ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ ಎಂದು ಆರೋಪಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!