ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಕೇಸ್ ಗೆ ಸಂಬಧಪಟ್ಟಂತೆ ಅಮಾಯಕ ಪೊಲೀಸರ ಮೇಲೆ ಕ್ರಮ ಏಕೆ? ಎಂದು ಹೇಳುವ ಮೂಲಕ ಬಿವೈ ವಿಜಯೇಂದ್ರ ಆಕ್ರೋಶ ಹೊರ ಹಾಕಿದ್ದಾರೆ.
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟ ಮತ್ತು ಈ ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹಸಚಿವರು, ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು.
ಅದನ್ನು ಬಿಟ್ಟು ಅಮಾಯಕ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿದ್ದಾರೆ ಎಂದು ಟೀಕಿಸಿದರು. ಇವರ ಹುಳುಕು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡರು ಎಂದು ವಿಜಯೇಂದ್ರ ಆರೋಪಿಸಿದರು.
ರಸಗೊಬ್ಬರ ಕೊರತೆಯಿಂದ ರೈತರು ರಾಜ್ಯದಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಪರಿಹಾರ ನೀಡುತ್ತಿಲ್ಲ. ಇದರ ಕುರಿತು ಚರ್ಚೆಯೂ ಆಗುತ್ತಿಲ್ಲ. ಈ ಎಲ್ಲ ವಿಷಯಗಳನ್ನು ಸದನದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿದ್ದೇವೆ. ಸಾಂಕೇತಿಕವಾಗಿ ಎರಡೂ ಪಕ್ಷಗಳ ಶಾಸಕರು ಹೋರಾಟ ಮಾಡಿದ್ದೇವೆ ಎಂದು ವಿವರಿಸಿದರು.ಇವೆಲ್ಲ ವಿಷಯಗಳನ್ನು ಸದನದ ಒಳಗೆ ಪ್ರಸ್ತಾಪಿಸುತ್ತೇವೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಹೊಣೆಗೇಡಿ ಸರಕಾರ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸುತ್ತೇವೆ ಎಂದು ವಿಜಯೇಂದ್ರ ತಿಳಿಸಿದರು.