ಚಿತ್ರದುರ್ಗ: ಕ್ಷುಲ್ಲಕ ವಿಚಾರಕ್ಕೆ ನೇಣಿಗೆ ಕೊರಳೊಡ್ಡಿದ 11ರ ಬಾಲಕಿ!

0
Spread the love

ಚಿತ್ರದುರ್ಗ:- ಕ್ಷುಲ್ಲಕ ವಿಚಾರಕ್ಕೆ 11 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

Advertisement

ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈಕೆ ಗೋಪಾಲ ಮತ್ತು ರುದ್ರಮ್ಮ ದಂಪತಿ ಪುತ್ರಿ. ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಸ್ಪಂದನಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪಕ್ಕದ ಮನೆ ಗೆಳತಿ ಸೈಕಲ್​ ಕೊಟ್ಟಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಾಲಕಿ ದುಡುಕು ನಿರ್ಧಾರ ಕೈಗೊಂಡಿದ್ದಾಳೆ.
ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

LEAVE A REPLY

Please enter your comment!
Please enter your name here