ಚಿತ್ರದುರ್ಗ:- ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರಗೆ ಬೆಳ್ಳಂಬೆಳಗ್ಗೆಯೇ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಎಸ್, ಇಲ್ಲಿನ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆಗಳ ಮೇಲೆ ಇಂದು ಬೆಳ್ಳಂ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಮಹತ್ತರ ದಾಖಲೆ ಪರಿಶೀಲಿಸಿದೆ. ಚಳ್ಳಕೆರೆ ಪಟ್ಟಣದಲ್ಲಿರುವ ನಾಲ್ಕು ಮನೆಗಳು ಹಾಗೂ ಬೆಂಗಳೂರಿನ ಸಹಕಾರನಗರದಲ್ಲಿರುವ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ ವಿರೇಂದ್ರ ಪಪ್ಪಿಯ ಸಹೋದರರಾದ ಕೆ.ಸಿ ನಾಗರಾಜ, ಕೆ.ಸಿ ರಾಜಣ್ಣ ಸೇರಿ ಶಾಸಕರ ಸಂಬಂಧಿಕ ಮನೆ ಮೇಲೂ ದಾಳಿಯಾಗಿದೆ. ದಾಳಿ ನಡೆಸಿ ಶಾಕ್ ಕೊಟ್ಟಿರುವ ಅಧಿಕಾರಿಗಳು ಮಹತ್ವದ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ.
ಖಾಸಗಿ ವಾಹನಗಳಲ್ಲಿ ಆಗಮಿಸಿದ ದೆಹಲಿಯ ಇಡಿ ಅಧಿಕಾರಿಗಳಿಂದ ಈ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಇನ್ನೂ ಕೆಸಿ ವೀರೇಂದ್ರ ಪಪ್ಪಿ ಅವರು ಕೆಲಸದ ಮೇಲೆ ಹೊರ ರಾಜ್ಯಕ್ಕೆ ತೆರಳಿರುವ ಮಾಹಿತಿ ಲಭ್ಯವಾಗಿದೆ. ಅಲ್ಲದೇ ವಿರಶೈವ ಸಂಘದ ಕಾರ್ಯದರ್ಶಿ ಪ್ರಸನ್ನ ಕುಮಾರ್ ಮನೆಯಲ್ಲಿಯೂ ಶೋಧ ಕಾರ್ಯ ನಡೆದಿದೆ.