ಚಿತ್ರದುರ್ಗ: ನಗರದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಕಾಂಗ್ರೆಸ್ ಮುಖಂಡನೊಬ್ಬರ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ರಸಗೊಬ್ಬರ ಅಂಗಡಿ ನಡೆಸುತ್ತಿದ್ದ ಶಿವಲಿಂಗಪ್ಪ (50) ಎಂದು ಗುರುತಿಸಲಾಗಿದ್ದು, ಅವರು ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು.
ಇಂದು ಅವರ ಮೃತದೇಹ ಮುಖ ಗುರುತಿಸಲು ಕಷ್ಟವಾಗುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ಕುರಿತು ಸಂಬಂಧಿಕರು ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ. ಈ ಘಟನೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.



