ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ʼಗೆ ಜೈಲೇ ಗತಿ

0
Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ದರ್ಶನ್, ಪವಿತ್ರಾಗೌಡ ಬಿಗ್‌ ಶಾಕ್‌ ಆಗಿದೆ. ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿದೆ. ಆದರೆ ಪ್ರಕರಣದ A13 ಆರೋಪಿ ದೀಪಕ್‌ಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಸದ್ಯ ದರ್ಶನ್​ಗೆ ಜೈಲೇ ಗತಿ ಆಗಿದೆ.

Advertisement

ಜಾಮೀನು ಸಿಗದಿರೋ ಕಾರಣ ಅನಾರೋಗ್ಯ ಕಾರಣ ನೀಡಿ ದರ್ಶನ್ ಬೆಂಗಳೂರಿಗೆ ಶಿಫ್ಟ್​ ಆಗುವ ಸಾಧ್ಯತೆ ಇದೆ. ಈಗಾಗಲೇ ದರ್ಶನ್ ಕುಟುಂಬಸ್ಥರು ಮೆಡಿಕಲ್ ವರದಿ ಸಿದ್ಧ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣ ನೀಡಿ ಬೆಂಗಳೂರಿಗೆ ಶಿಫ್ಟ್​ ಆಗಲು ಪ್ಲ್ಯಾನ್​ ನಡೆದಿದೆ. ದರ್ಶನ್ ಕಳೆದ ಕೆಲ ದಿನಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ನಡೆಯಲು ಕೂಡ ಅವರಿಗೆ ಕಷ್ಟ ಆಗುತ್ತಿದೆ ಎನ್ನಲಾಗಿದೆ.

ಎರಡೂ ಕಡೆಯವರ ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶ ಜೈಶಂಕರ್ ಅವರು ಅ.10 ರಂದು ವಿಚಾರಣೆ ಪೂರ್ಣಗೊಳಿಸಿ ಅ. 14ಕ್ಕೆ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್‌ 11ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು.

ಸದ್ಯ ದರ್ಶನ್‌ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ಪರ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿ ಪ್ರಸನ್ನಕುಮಾರ್‌ ಅವರು ವಾದ ಮಂಡಿಸಿದ್ದಾರೆ. ದರ್ಶನ್‌ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಪವಿತ್ರಾ ಗೌಡ ಪರವಾಗಿ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು.


Spread the love

LEAVE A REPLY

Please enter your comment!
Please enter your name here