ಚಿತ್ರದುರ್ಗ: ಭೀಕರ ಅಪಘಾತಕ್ಕೆ ಮೂವರು ದುರ್ಮರಣ!

0
Spread the love

ಚಿತ್ರದುರ್ಗ:- ಇಂದು ಬೆಳ್ಳಂಬೆಳಗ್ಗೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

Advertisement

ನಿಂತಿದ್ದ ಲಾರಿಗೆ ಮತ್ತೊಂದು ಲಾರಿ, ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್​​ಪಿ ದಿನಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಲ್ಲದೇ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here