HomeSports Newsವೈಭವ್ ಸೂರ್ಯವಂಶಿ ಆಟಕ್ಕೆ ಕ್ರಿಸ್ ಗೇಲ್ ಭಾರಿ ಮೆಚ್ಚುಗೆ;‘ಹೊಸ ಸಿಕ್ಸರ್ ಮೆಷಿನ್’ ಎಂದ ಯೂನಿವರ್ಸಲ್ ಬಾಸ್!

ವೈಭವ್ ಸೂರ್ಯವಂಶಿ ಆಟಕ್ಕೆ ಕ್ರಿಸ್ ಗೇಲ್ ಭಾರಿ ಮೆಚ್ಚುಗೆ;‘ಹೊಸ ಸಿಕ್ಸರ್ ಮೆಷಿನ್’ ಎಂದ ಯೂನಿವರ್ಸಲ್ ಬಾಸ್!

For Dai;y Updates Join Our whatsapp Group

Spread the love

ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು, ಈ ಜಯದ ಹೀರೋ ಆಗಿ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಹೊರಹೊಮ್ಮಿದ್ದಾರೆ.

ಸನ್‌ರೈಸರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ವೈಭವ್ ಕೇವಲ 29 ಎಸೆತಗಳಲ್ಲಿ 97 ರನ್ ಸಿಡಿಸಿ ಕ್ರಿಕೆಟ್ ಅಭಿಮಾನಿಗಳನ್ನು ಬೆರಗುಗೊಳಿಸಿದರು. ಅವರ ಸ್ಫೋಟಕ ಇನ್ನಿಂಗ್ಸ್‌ನಲ್ಲಿ 12 ಸಿಕ್ಸರ್ ಮತ್ತು 5 ಬೌಂಡರಿಗಳು ಸೇರಿದ್ದವು. ವೈಭವ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್ 47 ರನ್‌ಗಳಿಂದ ಗೆದ್ದು ಕ್ವಾಲಿಫೈಯರ್-2ಕ್ಕೆ ಪ್ರವೇಶಿಸಿದೆ.

ಈ ಅದ್ಭುತ ಪ್ರದರ್ಶನದೊಂದಿಗೆ ವೈಭವ್ ಹಲವು ದಾಖಲೆಗಳನ್ನು ನಿರ್ಮಿಸಿದ್ದು, ಐಪಿಎಲ್‌ನ ಒಂದು ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಕ್ರಿಸ್ ಗೇಲ್ ಅವರ ದಾಖಲೆಯನ್ನೇ ಮುರಿದಿದ್ದಾರೆ. ಆದರೆ ಕೇವಲ 3 ರನ್‌ಗಳಿಂದ ಶತಕ ತಪ್ಪಿಸಿಕೊಂಡ ಕಾರಣ, ಐಪಿಎಲ್ ಇತಿಹಾಸದ ಅತಿ ವೇಗದ ಶತಕದ ದಾಖಲೆ ಮುರಿಯುವ ಅವಕಾಶ ಕೈಚೆಲ್ಲಿದರು. ಆ ದಾಖಲೆ ಇನ್ನೂ ಕ್ರಿಸ್ ಗೇಲ್ ಹೆಸರಿನಲ್ಲೇ ಉಳಿದಿದೆ.

ವೈಭವ್ ಆಟಕ್ಕೆ ಸ್ವತಃ ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವೈಭವ್ ಫೋಟೋ ಹಂಚಿಕೊಂಡಿರುವ ಗೇಲ್, “ವೈಭವ್ ಅಸಾಧಾರಣ ಹಾಗೂ ಅದ್ಭುತ ಆಟಗಾರ. ಯುವ ಪ್ರತಿಭೆ, ಹೊಸ ಸಿಕ್ಸರ್ ಮೆಷಿನ್. ಆದರೆ ವೇಗದ ಶತಕದ ದಾಖಲೆಯನ್ನು ಮುರಿಯದಿರುವುದು ಸ್ವಲ್ಪ ಬೇಸರ” ಎಂದು ಬರೆದುಕೊಂಡಿದ್ದಾರೆ.

ವೈಭವ್ ಈ ಸೀಸನ್‌ನಲ್ಲಿ ಹಲವು ಅಪರೂಪದ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ. ಒಂದು ಐಪಿಎಲ್ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಅನ್‌ಕ್ಯಾಪ್ಡ್ ಆಟಗಾರ ಎಂಬ ದಾಖಲೆ ಅವರದಾಗಿದೆ. ಅಲ್ಲದೆ, 200ಕ್ಕೂ ಹೆಚ್ಚು ಸ್ಟ್ರೈಕ್‌ರೇಟ್‌ನಲ್ಲಿ 600ಕ್ಕೂ ಹೆಚ್ಚು ರನ್ ಗಳಿಸಿದ ಐಪಿಎಲ್ ಇತಿಹಾಸದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯೂ ಇವರ ಪಾಲಾಗಿದೆ.

ಇದರ ಜೊತೆಗೆ ಪ್ಲೇಆಫ್ ಪಂದ್ಯದಲ್ಲಿ ಅತಿ ಹೆಚ್ಚು 12 ಸಿಕ್ಸರ್ ಬಾರಿಸಿದ ಆಟಗಾರ, ಕೇವಲ 24 ಎಸೆತಗಳಲ್ಲಿ 10 ಸಿಕ್ಸರ್ ಸಿಡಿಸಿದ ದಾಖಲೆ ಹಾಗೂ ಪವರ್‌ಪ್ಲೇಯಲ್ಲಿ ಅತಿ ಹೆಚ್ಚು 8 ಸಿಕ್ಸರ್ ಬಾರಿಸಿದ ಸಾಧನೆಯನ್ನೂ ವೈಭವ್ ಮಾಡಿದ್ದಾರೆ.

ಐಪಿಎಲ್ 2026ರಲ್ಲಿ ಇದುವರೆಗೆ ವೈಭವ್ 15 ಇನ್ನಿಂಗ್ಸ್‌ಗಳಲ್ಲಿ 680 ರನ್ ಗಳಿಸಿದ್ದು, 45.33 ಸರಾಸರಿ ಮತ್ತು 242.85 ಸ್ಟ್ರೈಕ್‌ರೇಟ್ ಹೊಂದಿದ್ದಾರೆ. ಈ ಅವಧಿಯಲ್ಲಿ ಒಂದು ಶತಕ ಹಾಗೂ ನಾಲ್ಕು ಅರ್ಧಶತಕಗಳು ಅವರ ಖಾತೆಯಲ್ಲಿವೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!