Home Bengaluru News ಕೋಟಿ-ಕೋಟಿ ಅವ್ಯವಹಾರ: ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ CID ತಂಡ ದಾಳಿ!

ಕೋಟಿ-ಕೋಟಿ ಅವ್ಯವಹಾರ: ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ CID ತಂಡ ದಾಳಿ!

0
ಕೋಟಿ-ಕೋಟಿ ಅವ್ಯವಹಾರ: ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ CID ತಂಡ ದಾಳಿ!
Spread the love

ಬೆಂಗಳೂರು:- ಕೋಟಿ-ಕೋಟಿ ಅವ್ಯವಹಾರ ಆರೋಪ ಹಿನ್ನೆಲೆ, ಇಂದು ವಿಶ್ವೇಶ್ವರಯ್ಯ ಟವರ್‌ನಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ CID ತಂಡ ದಾಳಿ ಮಾಡಿದೆ.

ಸತತ 3 ಗಂಟೆ ಕಾಲ ದಾಖಲೆಗಳನ್ನು ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಕೆಲ ಮಹತ್ವದ ಕಡತಗಳನ್ನು ವಶಕ್ಕೆ ಪಡೆದು ಕೊಂಡೊಯ್ದಿದ್ದಾರೆ.

2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲಕೊಡಿಸುವುದಾಗಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿದೆ.

ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ ಸುಬ್ಬಪ್ಪ, ‘ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾ., ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲು ಮಾಡಲಾಗಿತ್ತು.

ಕೆಲ ದಿನಗಳ ಹಿಂದೆಯಷ್ಟೇ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಸಿಐಡಿ ಅಧಿಕಾರಿಗಳು ಭೋವಿ ನಿಗಮದ ಅಧೀಕ್ಷಕ ಸುಬ್ಬಪ್ಪನನ್ನ ಬಂಧಿಸಿದ್ದರು ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here