ಮಲ್ಟಿಫ್ಲೆಕ್ಸ್ʼಗಳಲ್ಲಿ ಇನ್ಮುಂದೆ ಸಿನಿಮಾ ಟಿಕೆಟ್ʼಗೆ 200 ರೂ ಮಾತ್ರ: ಸಿಎಂ ಘೋಷಣೆ

0
Spread the love

ಬೆಂಗಳೂರು: ಕರ್ನಾಟಕ ಬಜೆಟ್ 2025ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದಾರೆ. ಬಜೆಟ್​ನಲ್ಲಿ ಸಿನಿಮಾ ಪ್ರಿಯರಿಗೆ ಸಿಹಿ ನೀಡಿದ್ದಾರೆ. ರಾಜ್ಯದ ಮಲ್ಟಿಪ್ಲೆಕ್ಸ್ ಗಳಿಗೂ ಸೇರಿದಂತೆ ಎಲ್ಲಾ ಚಿತ್ರ ಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರ 200 ರೂ ಸೀಮಿತಗೊಳಿಸುವ ಘೋಷಣೆ ಮಾಡಲಾಗಿದೆ.

Advertisement

ಹೌದು ಕರ್ನಾಟಕದ ಸಿನಿಮಾ ಪ್ರೇಮಿಗಳ ಬಹುವರ್ಷದ ಬೇಡಿಕೆ ಆಗಿದ್ದ ಮಲ್ಟಿಪ್ಲೆಕ್ಸ್​ ಟಿಕೆಟ್ ದರ ನಿಯಂತ್ರಣ ಮಾಡುವ ಬೇಡಿಕೆಗೆ ಸರ್ಕಾರ ಅಸ್ತು ಎಂದಿದೆ. ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್​ನಲ್ಲಿ ಮಲ್ಟಿಪ್ಲೆಕ್ಸ್​ ಟಿಕೆಟ್ ದರಗಳನ್ನು 200 ರೂಪಾಯಿಗೆ ನಿಗದಿಪಡಿಸಿದ್ದಾರೆ.

ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ.

ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್​ಗಳಲ್ಲಿ ಏಕರೂಪದ ದರನಿಗದಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.


Spread the love

LEAVE A REPLY

Please enter your comment!
Please enter your name here