ವಿಜಯಪುರ:- ಸಿನಿಮೀಯ ರೀತಿಯಲ್ಲಿ ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ನಲ್ಲಿ ದರೋಡೆ ನಡೆದಿದೆ.
ಬ್ಯಾಂಕ್ ವಹಿವಾಟು ಸಮಯ ಮುಗಿದ ಮೇಲೆ ಬ್ಯಾಂಕ್ಗೆ 5ಕ್ಕೂ ಹೆಚ್ಚು ಮುಸುಕುಧಾರಿಗಳು ನುಗ್ಗಿ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ ಕಟ್ಟಿಹಾಕಿ ಕಳ್ಳರು ಕಳ್ಳತನ ಮಾಡಿದ್ದಾರೆ.
ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬ್ಯಾಂಕ್ನಲ್ಲಿ ಎಷ್ಟು ಹಣ ಕಳ್ಳತನದ ಆಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಅಂದಾಜು 8 ಕೋಟಿ ರೂ. ನಗದು ಹಣ ಹಾಗೂ ಸುಮಾರು 50 ಕೆಜಿಗೂ ಅಧಿಕ ಚಿನ್ನಾಭರಣ ದರೋಡೆಯಾಗಿರೋ ಶಂಕೆ ವ್ಯಕ್ತವಾಗಿದೆ. ಪೊಲೀಸರು ಬ್ಯಾಂಕಿನ ಸಿಸಿ ಕ್ಯಾಮೆರಾ ಮತ್ತು ಹಾರ್ಡ್ ಡಿಸ್ಕ್ ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರ ಸಂಪರ್ಕಿಸುವ ಹಾಗೂ ಚಡಚಣದ ಇತರೇ ರಸ್ತೆಗಳಿಗೂ ಪೊಲೀಸರು ನಾಕಾ ಬಂದಿ ಹಾಕಿ ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.



