ಸಿನಿಮೀಯ ರೀತಿ ಪ್ರಿಯತಮೆ ಮಾಡಿಸಿದ್ದು ಪ್ರಿಯಕರನ ಮೇಲೆ ರಾಬರಿ! ಯಾಕೆ ಗೊತ್ತಾ..?

0
Spread the love

ಬೆಂಗಳೂರು: ಮೊಬೈಲ್‌ನಲ್ಲಿ ಫೋಟೋ ವಿಡಿಯೋ ಡಿಲೀಟ್ ಮಾಡಿಸಲಿಕ್ಕೆ ಲವ್ವರ್ ಮೇಲೆ ರಾಬರಿ ಮಾಡಿಸಿದ್ದ ಟೆಕ್ಕಿ ಯುವತಿ ಸೇರಿದಂತೆ ಮೂವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.

Advertisement

ಪ್ರಿಯಕರ ವಂಶಿಕೃಷ್ಣರೆಡ್ಡಿ ಎಂಬಾತ ಕಳೆದ ಸೆಪ್ಟೆಂಬರ್ 20 ರಂದು ಶೃತಿ ಭೇಟಿಗೆ ತೆರಳಿದ್ದ. ಅದರಂತೆ ಭೇಟಿಯಾಗಿ ಆಕೆಯನ್ನು ಕರೆದುಕೊಂಡು ಹೊರಬರುತ್ತಿದ್ದಂತೆ ಸ್ವಿಫ್ಟ್ ಕಾರಿನಲ್ಲಿ ಬಂದವರು, ವಂಶಿಕೃಷ್ಣನ ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ.

ಈ ವೇಳೆ ಜಗಳ ತೆಗೆದು ಆತನ ಬಳಿಯಿದ್ದ ಮೊಬೈಲ್ ಕಸಿದುಕೊಂಡಿದ್ದಾರೆ. ಅಲ್ಲದೇ ವಂಶಿಕೃಷ್ಣನ ಜೊತೆಯಲ್ಲಿಯೇ ಇದ್ದ ಶೃತಿಯ ಮೊಬೈಲ್ ನ್ನು ಸಹ ಕಸಿದು ಕೊಂಡಿದ್ದಾರೆ. ನಂತರ ದೂರು ಕೊಡುವುದು ಬೇಡ, ಮೊಬೈಲ್ ಹೋದರೆ ಹೋಗಲಿ ಎಂದು ಪ್ರಿಯತಮೆ ಶೃತಿ, ವಂಶಿ ಮುಂದೆ ಡ್ರಾಮ ಮಾಡಿದ್ದಾಳೆ. ಆದರೂ, ವಂಶಿಕೃಷ್ಣ ಬೆಳ್ಳಂದೂರು ಠಾಣೆಗೆ ಕಾರಿನ ನಂಬರ್ ಸಮೇತ ದೂರು ನೀಡಿದ್ದರು. ಈ ಕುರಿತು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಪೊಲೀಸರ ವಿಚಾರಣೆ ವೇಳೆ ಶೃತಿಯೇ ಬೈಕ್ಗೆ ಡಿಕ್ಕಿ ಮಾಡಿ ಮೊಬೈಲ್ ಕಸಿದುಕೊಳ್ಳಲಿಕ್ಕೆ ಹೇಳಿದ್ದಳು ಎಂಬುದನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಫೋಟೋಸ್, ವಿಡಿಯೋಸ್ ಡಿಲೀಟ್ ಮಾಡಿಸಲಿಕ್ಕೆ ಒಂದೂವರೆ ಲಕ್ಷ ಹಣ ಕೊಟ್ಟು ಮೊಬೈಲ್ ರಾಬರಿ ಮಾಡುವ ಖರ್ತನಾಕ್ ಪ್ಲಾನ್ ಮಾಡಿರುವುದು ತನಿಖೆ ಬಳಿಕ ತಿಳಿದಿದೆ. ಸಧ್ಯ ಬೆಳ್ಳಂದೂರು ಪೊಲೀಸರಿಂದ ಟೆಕ್ಕಿ ಶೃತಿ ಸೇರಿ ನಾಲ್ವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here