ಬೆಂಗಳೂರಿನ ನಾಗರೀಕರೇ ಗಮನಿಸಿ: ಈ ಪ್ರದೇಶಗಳಲ್ಲಿ ನಾಳೆಯಿಂದ ಎರಡು ದಿನ ಪವರ್ ಕಟ್!

0
Spread the love

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆಯಿಂದ ಎರಡು ದಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Advertisement

66/11 ಕೆವಿ ಎಲಿಟಾ ಪ್ರೋಮೊನೇಡ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ನಗರದ ಹಲವು ಪ್ರದೇಶಗಳಲ್ಲಿ ಫೆಬ್ರವರಿ 14 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಫೆಬ್ರವರಿ 14ರಂದು ಎಲ್ಲೆಲ್ಲಿ ಕರೆಂಟ್ ಕಟ್?: ಶುಕ್ರವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೂ ಎಲಿಟಾ ಪ್ರೋಮೊನೇಡ್ ಅಪಾರ್ಟ್ ಮೆಂಟ್, ಕೆಆರ್ ಲೇಔಟ್, ಶಾರದಾನಗರ, ಚುಂಚುನ್ ಘಟ್ಟ ಮತ್ತು ಉಪ ಕೇಂದ್ರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಫೆಬ್ರವರಿ 14ರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಶಾಂತಿನಿಕೇತನ ರೆಸಿಡೆನ್ಸೀಯಲ್ ಅಪಾರ್ಟ್‌ಮೆಂಟ್, ಬ್ರಿಗೇಡ್ ಲೇಕ್ ಫ್ರಂಟ್ ರೆಸಿಡೆನ್ಸೀಯಲ್ ಅಪಾರ್ಟ್‌ಮೆಂಟ್, ಟೋಟಲ್ ಎನ್ವಿರಾನ್‌ಮೆಂಟ್ ಅಪಾರ್ಟ್‌ಮೆಂಟ್, ಇಪಿಐಪಿ ಇಂಡಸ್ಟ್ರೀಯಲ್ ಏರೀಯಾ, ಸದರಮಂಗಳ ಇಂಡಸ್ಟ್ರೀಯಲ್ ಏರೀಯಾ, ನಲ್ಲರಹಳ್ಳಿ ವಿಲೇಜ್, ಪಟ್ಟಂದೂರು ಅಗ್ರಹಾರ, ಇಸಿಸಿ ರೋಡ್, ಸಿದ್ದಾಪುರ ರೋಡ್, ಐಟಿಪಿಎಲ್ ಮುಖ್ಯ ರಸ್ತೆಯಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಶನಿವಾರ ಎಲ್ಲೆಲ್ಲಿ ಕರೆಂಟ್‌ ಕಟ್‌?: ಫೆಬ್ರವರಿ 15ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಶ್ರೀನಗರ, ಹೊಕೆರೆಹಳ್ಳಿ, ಪಿಇಎಸ್ ಎಂಜಿನಿಯರಿಂಗ್ ಕಾಲೇಜು, ವೀರಭದ್ರನಗರ, ಬ್ಯಾಂಕ್ ಕಾಲೋನಿ, ಹನುಮಂತನಗರ, ಗಿರಿನಗರ, ಸೀತಾ ವೃತ್ತ, ವಿದ್ಯಾಪೀಠ ವೃತ್ತ, ಪ್ರಮೋದ್ ಲೇಔಟ್, ಮುನೇಶ್ವರ ಬ್ಲಾಕ್, ನಾಗೇಂದ್ರ ಬ್ಲಾಕ್, ಬುಲ್ ಟೆಂಪಲ್ ರಸ್ತೆ, ಕತ್ರಿಗುಪ್ಪೆ, ಅವಲಹಳ್ಳಿ, ಸ್ಟರ್ಲಿಂಗ್ ಅಪಾರ್ಟ್‌ಮೆಂಟ್, ಎನ್ ಟಿ ವೈ ಲೇಔಟ್, ತ್ಯಾಗರಾಜನಗರ.

ಬಸವನಗುಡಿ, ಬನಶಂಕರಿ 3ನೇ ಹಂತ, ನಿಮ್ಹಾನ್ಸ್, ಕಿದ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂಧಿರಾಗಾಂಧಿ, ಜಯನಗರ-1ನೇ, 2ನೇ, 3ನೇ, 4ನೇ, 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾರ್ಡನ್. “ಎಲ್ಕೆಟ್ರಾನ್ ಸಿಟಿ ಫೇಸ್ -2, ವೀರಸಂದ್ರ, ದೊಡ್ಡನಾಗಮಂಗಳ, ಟೆಕ್ಮಹಿಂದ್ರ, ಇ.ಹೆಚ್.ಟಿ.ಟಾಟಾ ಬಿ.ಪಿ.ಸೋಲಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಕಟ್ಟಾಗಲಿದೆ ಎಂದು ತಿಳಿಸಿದೆ.


Spread the love

LEAVE A REPLY

Please enter your comment!
Please enter your name here