ವಿಜಯಸಾಕ್ಷಿ ಸುದ್ದಿ, ಗದಗ: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ ಗದಗ ಜಿಲ್ಲಾ ಸಮಿತಿ ವತಿಯಿಂದ ವಿಶ್ವ ಕಾರ್ಮಿಕ ದಿನಾಚರಣೆಯನ್ನು ನಗರದ ಗಾಂಧಿ ಸರ್ಕಲ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಹೇಶ ಹಿರೇಮಠ ಮಾತನಾಡಿ, ಕೇಂದ್ರ ಸರ್ಕಾರವು ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತರುವ ಮೂಲಕ ಕಾರ್ಮಿಕರನ್ನು ಬೀದಿಪಾಲು ಮಾಡಲು ಹೊರಟಿದೆ. ಹಾಗಾಗಿ ಇದೇ ತಿಂಗಳು 20ರಂದು ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಈ ಮುಷ್ಕರದಲ್ಲಿ ಎಲ್ಲಾ ಕಾರ್ಮಿಕರು ಭಾಗವಹಿಸಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಬಸವರಾಜ ಮಂತೂರ, ಮಹೇಶ ಹಿರೇಮಠ, ರುದ್ರಗೌಡ ಸಂಕನಗೌಡ ಗೌಡರ, ದೇವಪ್ಪ ಕಲ್ಮನಿ, ಬಸವರಾಜ ಅರ್ಕಸಾಲಿ, ಸುಶೀಲಾ ಚಲವಾದಿ, ಯಶೋಧಾ ಬೆಟಗೇರಿ, ಚನ್ನಮ್ಮ ಶ್ಯಾವಿ, ಯಮುನಾ ಗೋಟೂರ, ಬೀಬಿಜಾನ ಮುಲ್ಲಾ, ಸುನಂದಾ ಶ್ಯಾವಿ ಸೇರಿದಂತೆ ಸಿಐಟಿಯು ಕಾರ್ಯಕರ್ತರು ಪದಾಧಿಕಾರಿಗಳು ಉಪಸ್ಥಿತರಿದ್ದರು.


