ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ದಿನನಿತ್ಯ ಪಟ್ಟಣದ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡು ಸೇವೆ ನಿರ್ವಹಿಸುತ್ತಿರುವ ಪೌರಕಾರ್ಮಿಕರು, ಹಬ್ಬ ಹರಿದಿನಗಳೆನ್ನದೆ ತಮ್ಮ ಕಾರ್ಯ ಮಾಡುತ್ತಿದ್ದು, ಪೌರಕಾರ್ಮಿಕರ ಅನುಪಸ್ಥಿತಿಯನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರನ್ನು ಎಲ್ಲರೂ ಗೌರವದಿಂದ ಕಾಣಬೇಕು ಎಂದು ವರ್ತಕ ಗಂಗಾಧರಯ್ಯ ಪುರಾಣಿಕಮಠ ಹೇಳಿದರು.
ಅವರು ಪಟ್ಟಣದ ಪೇಟೆ ಹನುಮಂತದೇವರ ದೇವಸ್ಥಾನದ ಹತ್ತಿರವಿರುವ ತಮ್ಮ ಅಂಗಡಿಯಲ್ಲಿ ದೀಪಾವಳಿ ಪ್ರಯುಕ್ತ ಪಟ್ಟಣದ ಪುರಸಭೆ ಪೌರಕಾರ್ಮಿಕರನ್ನು ಆಹ್ವಾನಿಸಿ, ಅವರಿಗೆ ಬಟ್ಟೆ, ಉಡುಗರೆ ನೀಡಿ ಸನ್ಮಾನಿಸಿ ಮಾತನಾಡಿದರು.
ಪೌರಕಾರ್ಮಿಕರಿಗೂ ಕುಟುಂಬವಿದ್ದು, ಅವರು ಸಹ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವ ತವಕದಲ್ಲಿರುತ್ತಾರೆ. ಆದರೂ ಸಹ ಊರಿನ ಸ್ವಚ್ಛತೆಯ ಕಲ್ಪನೆಯ ಹಿನ್ನೆಲೆಯಲ್ಲಿ ಹಬ್ಬವನ್ನು ಸರಿಯಾಗಿ ಆಚರಿಸದೆ ತಮ್ಮ ಕಾರ್ಯದಲ್ಲಿ ತೊಡಗಿರುವುದು ಮೆಚ್ಚುವ ಸಂಗತಿಯಾಗಿದ್ದು, ಅವರ ಕಾರ್ಯಕ್ಕೆ ಪ್ರತಿಯೊಬ್ಬರೂ ಗೌರವ ನೀಡುವುದು ಅಗತ್ಯವಾಗಿದೆ. ಹಬ್ಬದ ಸಂಭ್ರಮವನ್ನು ಪೌರಕಾರ್ಮಿಕರೊಂದಿಗೆ ಆಚರಿಸಿಕೊಂಡಿರುವುದು ತೃಪ್ತಿ ತಂದಿದೆ ಎಂದರು.


