• About
  • Advertise
  • Privacy & Policy
  • Contact
Saturday, October 24, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಮುನ್ಸಿಪಲ್ ಕಾಲೇಜಿನಲ್ಲಿ ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ಕಿತ್ತಾಟ! ಘೋಷಣೆ, ತಳ್ಳಾಟದಿಂದ ಬಿಗುವಿನ ವಾತಾವರಣ!

Vijaya Sakshi by Vijaya Sakshi
October 23, 2026
in Gadag News
0
ಮುನ್ಸಿಪಲ್ ಕಾಲೇಜಿನಲ್ಲಿ ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ಕಿತ್ತಾಟ! ಘೋಷಣೆ, ತಳ್ಳಾಟದಿಂದ ಬಿಗುವಿನ ವಾತಾವರಣ!
0
SHARES
219
VIEWS
Share on FacebookShare on Twitter

ಗದಗ: ನಗರದ ಮುನ್ಸಿಪಲ್ ಕಾಲೇಜಿನ ಮತಗಟ್ಟೆ ಮುಂದೆ ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಮೂರು ಸುತ್ತಿನ ವಾಗ್ವಾದ, ಘೋಷಣೆ ಹಾಗೂ ತಳ್ಳಾಟದ ಘಟನೆ ಶುಕ್ರವಾರ ತೀವ್ರ ಚರ್ಚೆಗೆ ಗ್ರಾಸವಾಯಿತು.

ಈ ಬೆಳವಣಿಗೆ ಹೊರತುಪಡಿಸಿ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಜಿಲ್ಲೆಯಲ್ಲಿ ಬಹುತೇಕ ಶಾಂತಿಯುತವಾಗಿ ನಡೆಯಿತು. ಜಿಲ್ಲೆಯಾದ್ಯಂತ ಶೇ.77.66ರಷ್ಟು ಮತದಾನ ದಾಖಲಾಗಿದೆ.

ಬೆಳಗ್ಗೆ ಬಿಜೆಪಿ ಕಾರ್ಯಕರ್ತನೊಬ್ಬ ಪಕ್ಷದ ಶಾಲು ಧರಿಸಿ ಮತಗಟ್ಟೆ ಪ್ರವೇಶಿಸಿದ್ದಾನೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪಿಸಿದರು. ಪೊಲೀಸರು ಮಧ್ಯಪ್ರವೇಶಿಸಿ ಆತನನ್ನು ಹೊರಗೆ ಕಳುಹಿಸಿದಾಗ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಮಧ್ಯಾಹ್ನ ಬಿಜೆಪಿ ವೀಕ್ಷಕರೊಬ್ಬರಿಗೆ ಮತಗಟ್ಟೆಯೊಳಗೆ ಪ್ರವೇಶಿಸಲು ಅವಕಾಶ ನೀಡಿದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮತ್ತೆ ವಾಗ್ವಾದ ನಡೆಯಿತು.

ಮತದಾನ ಮುಕ್ತಾಯದ ವೇಳೆ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ, ಶಾಸಕ ಸಿ.ಸಿ. ಪಾಟೀಲ, ಅನಿಲ ಮೆಣಸಿನಕಾಯಿ, ರಾಜು ಕುರಡಗಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಮತಗಟ್ಟೆ ಬಳಿ ಆಗಮಿಸಿದರು. ಈ ಸಂದರ್ಭದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ತಮ್ಮ ಮುಖಂಡರ ಪರ ಜೈಕಾರ ಕೂಗಲಾರಂಭಿಸಿದರು. ಪರಸ್ಪರ ಘೋಷಣೆ, ವಾಗ್ವಾದ ಹಾಗೂ ತಳ್ಳಾಟದಿಂದ ಪರಿಸ್ಥಿತಿ ಬಿಗಡಾಯಿಸಿತು. ಪೊಲೀಸರು ಮತಗಟ್ಟೆಯ ಗೇಟ್ ಮುಚ್ಚಿ ಪರಿಸ್ಥಿತಿ ನಿಯಂತ್ರಿಸಲು ಮುಂದಾದರು.

ಈ ವೇಳೆ ಬಿಜೆಪಿ ಜಿಲ್ಲಾ ಉಸ್ತುವಾರಿ ಜಯತೀರ್ಥ ಕಟ್ಟಿ ಅವರನ್ನು ಪೊಲೀಸರು ತಳ್ಳಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಪೊಲೀಸರ ವರ್ತನೆ ಏಕಪಕ್ಷೀಯವಾಗಿದೆ ಎಂದು ಆರೋಪಿಸಿದ ಬಿಜೆಪಿ ಮುಖಂಡರು, ಮೇಲಧಿಕಾರಿಗಳಿಗೆ ದೂರು ನೀಡುವುದಾಗಿ ಎಚ್ಚರಿಸಿದರು. ಕಾಂಗ್ರೆಸ್ ಕಾರ್ಯಕರ್ತರೂ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಮತದಾನ ಚುರುಕು:

ಜಿಲ್ಲೆಯ ಏಳು ತಾಲೂಕುಗಳಲ್ಲಿ 27 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಬೆಳಗ್ಗೆ 8 ಗಂಟೆಗೆ ಆರಂಭವಾದ ಮತದಾನ ಮೊದಲಿಗೆ ನಿಧಾನಗತಿಯಲ್ಲಿ ಸಾಗಿತು. ಬೆಳಗ್ಗೆ 10 ಗಂಟೆಗೆ ಶೇ.4.64, ಮಧ್ಯಾಹ್ನ 12 ಗಂಟೆಗೆ ಶೇ.25.27 ಹಾಗೂ ಮಧ್ಯಾಹ್ನ 2 ಗಂಟೆಗೆ ಶೇ.46.18ರಷ್ಟು ಮತದಾನ ದಾಖಲಾಗಿತ್ತು. ಬಳಿಕ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಮತದಾನ ಪ್ರಕ್ರಿಯೆ ಚುರುಕು ಪಡೆದುಕೊಂಡಿತು. ಸಂಜೆ 4 ಗಂಟೆಗೆ ಮತದಾನ ಪೂರ್ಣಗೊಂಡಿತು.

ಜಿಲ್ಲೆಯಲ್ಲಿ ಒಟ್ಟು 21,594 ಮತದಾರರು ನೋಂದಾಯಿಸಿಕೊಂಡಿದ್ದು, 13,756 ಪುರುಷರು ಹಾಗೂ 7,838 ಮಹಿಳೆಯರು ಇದ್ದರು. ಅಂತಿಮವಾಗಿ 11,028 ಪುರುಷರು ಹಾಗೂ 5,742 ಮಹಿಳೆಯರು ಸೇರಿದಂತೆ ಒಟ್ಟು 16,770 ಮಂದಿ ಮತ ಚಲಾಯಿಸಿದ್ದಾರೆ.

ಮತದಾನವನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಕೈಗೊಂಡಿತ್ತು. ಮತಗಟ್ಟೆಗಳಲ್ಲಿ ಮೊಬೈಲ್, ಕ್ಯಾಮೆರಾ, ಪೆನ್ನು, ವಾಚ್ ಹಾಗೂ ನೀರಿನ ಬಾಟಲಿ ಸೇರಿದಂತೆ ಕೆಲವು ವಸ್ತುಗಳನ್ನು ಒಳಗೆ ಕೊಂಡೊಯ್ಯುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಹೀಗಾಗಿ ಮತದಾರರು ಈ ವಸ್ತುಗಳನ್ನು ಹೊರಗಿಟ್ಟು ಮತ ಚಲಾಯಿಸಿದರು.

ಶಾಸಕರಿಂದ ಮತದಾನ:

ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಗದಗ ನಗರದ ಮುನ್ಸಿಪಲ್ ಕಾಲೇಜಿನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಗದಗ ಶಾಸಕ ಎಚ್.ಕೆ. ಪಾಟೀಲ ಅವರು ಹುಲಕೋಟಿಯಲ್ಲಿ ಮತದಾನ ಮಾಡಿದರು. ಈ ವೇಳೆ ಇಬ್ಬರೂ ಮತಗಟ್ಟೆಯ ಹೊರಗೆ ಸೌಹಾರ್ದಯುತವಾಗಿ ಮಾತುಕತೆ ನಡೆಸಿದ್ದು ಗಮನ ಸೆಳೆಯಿತು. ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರು ಲಕ್ಷ್ಮೇಶ್ವರ ಪುರಸಭೆ ಕಚೇರಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಲಕ್ಷ್ಮೇಶ್ವರಕ್ಕೆ ಮೊದಲ ಸ್ಥಾನ:

ತಾಲೂಕುವಾರು ಮತದಾನದಲ್ಲಿ ಲಕ್ಷ್ಮೇಶ್ವರ ಶೇ.82.70ರೊಂದಿಗೆ ಮೊದಲ ಸ್ಥಾನದಲ್ಲಿದೆ. ನರಗುಂದದಲ್ಲಿ ಶೇ.82.30, ಮುಂಡರಗಿಯಲ್ಲಿ ಶೇ.79.25, ರೋಣದಲ್ಲಿ ಶೇ.78.01, ಗದಗದಲ್ಲಿ ಶೇ.76.73, ಶಿರಹಟ್ಟಿಯಲ್ಲಿ ಶೇ.75.89 ಹಾಗೂ ಗಜೇಂದ್ರಗಡದಲ್ಲಿ ಶೇ.74.71ರಷ್ಟು ಮತದಾನ ದಾಖಲಾಗಿದೆ.

Tags: Gadag Election Newsgadag newskannadanewsKarnatakaKarnataka West Graduates ConstituencyVijayasakshivijayasakshinews
Previous Post

ಕರ್ನಾಟಕದಲ್ಲಿ ಅ.29ರವರೆಗೂ ಮಳೆ ಅಬ್ಬರ? ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

Next Post

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

October 24, 2026

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಕೊನೆ ಕ್ಷಣದಲ್ಲಿ ಬದಲಾವಣೆ ಸಾಧ್ಯ: ದಾವಣಗೆರೆ ದಕ್ಷಿಣ ಟಿಕೆಟ್ ವಿವಾದಕ್ಕೆ ಯತ್ನಾಳ್‌ ಹೊಸ ಬಾಂಬ್‌

ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ, ಸ್ಟಿಂಗ್ ವಿಡಿಯೋಗಳು ಹೊರಬರಬೇಕಿದೆ: ಯತ್ನಾಳ್ ಗಂಭೀರ ಆರೋಪ

October 24, 2026
ಸಿಎಂ ಸಿದ್ದರಾಮಯ್ಯ ನಿದ್ರಾದೇವಿಯ ವಶದಲ್ಲಿದ್ದಾರೆ: ಆರ್ ಅಶೋಕ್ ವ್ಯಂಗ್ಯ!

ಬೆಂಗಳೂರಿನ ಕಸ ವಿಲೇವಾರಿ ಟೆಂಡರ್ ನಲ್ಲಿ ₹133 ಕೋಟಿ ಅಕ್ರಮದ ಆರೋಪ! ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

October 24, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

October 24, 2026

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link