ಗದಗ:- ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪೊಲೀಸರಿಂದ ಲಾಠಿ ಪ್ರಹಾರ ಮಾಡಿರುವ ಘಟನೆ ಗದಗ ನಗರದ ಟಾಂಗಾಕೂಟ್ ಸರ್ಕಲ್ ನಲ್ಲಿ ಜರುಗಿದೆ.
ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ಜರುಗಿದೆ. ಎರಡು ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಹಚ್ಚುವ ವಿಚಾರಕ್ಕೆ ಗಲಾಟೆ ನಡೆದಿದೆ.

ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಗುಂಪುಗಳ ನಡುವೆ ಘರ್ಷಣೆ ಶುರುವಾಗಿದ್ದು, ಗಲಾಟೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಪರಿಸ್ಥಿತಿ ಕೈ ಮೀರಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಬೆಟಗೇರಿ ಸಿಪಿಐ ಧೀರಜ್ ಶಿಂಧೆ ಹಾಗೂ ಕೆಎಸ್‌ಆರ್‌ಪಿ, ಡಿಎಆರ್ ಪೊಲೀಸರಿಂದ ಲಾಠಿ ಚಾರ್ಜ್ ನಡೆದಿದೆ.
ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



