ಬೆಂಗಳೂರು: : ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಾಲಾ ಮಕ್ಕಳನ್ನು ಮಲದ ಗುಂಡಿ ಸ್ವಚ್ಚಕಾರ್ಯಕ್ಕೆ ಬಳಸಿಕೊಂಡ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
Advertisement
ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕೋಲಾರದ ಮಾಲೂರು ಮಲದಗುಂಡಿ ಪ್ರಕರಣದಿಂದ ವಿಷಯ ಗೊತ್ತಾಗಿದೆ. ಈ ಬಗ್ಗೆ ಮಾಹಿತಿ ತರಿಸುತ್ತಿದ್ದೇನೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಶಾಲಾ ಮಕ್ಕಳನ್ನ ಶೌಚ ಗುಂಡಿಗೆ ಇಳಿಸಿದ ಪ್ರಕರಣ ಸಂಬಂಧ ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕರಾದ ಅಭಿಷೇಕ್, ಮುನಿಯಪ್ಪ, ವಾರ್ಡನ್ ಮಂಜುನಾಥ್ರನ್ನು ಅಮಾನತು ಮಾಡಲಾಗಿದೆ. ಸಚಿವ ಡಾ.H.C.ಮಹದೇವಪ್ಪ ಸೂಚನೆ ಮೇರೆಗೆ ಜಿಲ್ಲಾಧಿಕಾರಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವರು ಸೂಚನೆ ನೀಡಿದ್ದಾರೆ.