ವಿಜಯಸಾಕ್ಷಿ ಸುದ್ದಿ, ರೋಣ: ಪಟ್ಟಣದ ಇತಿಹಾಸ ಪ್ರಸಿದ್ಧ ಸೋಮನಾಥ ಲಿಂಗೇಶ್ವರ ದೇವಸ್ಥಾನದಲ್ಲಿ ಸಂಗನಗೌಡ (ಮಿಥುನ್) ಪಾಟೀಲರ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಸ್ವಚ್ಛತಾ ಕಾರ್ಯ ನಡೆಯಿತು.
ಅಭಿಮಾನಿ ಬಳಗದವರು ದೇವಸ್ಥಾನದ ಆವರಣವನ್ನು ಸಂಪೂರ್ಣ ಸ್ವಚ್ಛಗೊಳಿಸಿ, ದೇವಸ್ಥಾನಕ್ಕೆ ಸುಣ್ಣ-ಬಣ್ಣದಿಂದ ಸಿಂಗರಿಸಿದರು. ಅಲ್ಲದೆ ದೇವಸ್ಥಾನದಲ್ಲಿ ಸಂಗನಗೌಡ ಜಿ ಪಾಟೀಲರವರ ಜನ್ಮದಿನದ ಪ್ರಯುಕ್ತ ಮಂಗಳವಾರ ಬೆಳಿಗ್ಗೆ ಸೋಮನಾಥ ಲಿಂಗೇಶ್ವರನಿಗೆ ವಿಶೇಷ ಅಭಿಷೇಕ ಹಮ್ಮಿಕೊಂಡಿದ್ದಾರೆ.
ಮುಖಂಡ ಅಸ್ಲಂ ಕೊಪ್ಪಳ ಮಾತನಾಡಿ, ಸೋಮನಾಥ ಲಿಂಗೇಶ್ವರ ದೇವಸ್ಥಾನಕ್ಕೆ ಸರ್ವ ಧರ್ಮದವರು ಆಗಮಿಸಿ ಪೂಜೆಯನ್ನು ಸಲ್ಲಿಸುತ್ತಾರೆ. ಪ್ರಾಚೀನ ಇತಿಹಾಸವನ್ನು ಹೊಂದಿರುವ ದೇವಸ್ಥಾನದ ಆವರಣವು ಸ್ವಚ್ಛತೆಯಿಂದ ಕೂಡಿರಬೇಕು ಎಂಬ ನಿಟ್ಟಿನಲ್ಲಿ ಅಭಿಮಾನಿ ಬಳಗದ ಸರ್ವ ಸದಸ್ಯರುಗಳು ಸೇರಿಕೊಂಡು ದೇವಸ್ಥಾನದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಜೊತೆಗೆ ದೇವಸ್ಥಾನಕ್ಕೆ ಸುಣ್ಣ-ಬಣ್ಣಗಳಿಂದ ಶೃಂಗರಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಯಲ್ಲಪ್ಪ ಕಿರೇಸೂರ, ಬಸವರಾಜ ಹಲಗಿ, ಶಾಬಾಜ್ ಗದಗ, ಬಶೀರ ಕಟ್ಟಿಮನಿ, ತೌಹಿದ ಜಲಾವರ, ಸಮೀರ ದೊಡ್ಡಮನಿ, ಕೈಪ್ ಮಕಾನದಾರ, ಮೋದಿನ ಹುಲ್ಯಾಳ, ಭರತ್ ಮಾನೆ, ಮಹದೇವಪ್ಪ ತೆಗ್ಗಿನಮನಿ, ಮಲ್ಲು ರಾಯನಗೌಡ್ರ, ಶಶಿಕುಮಾರ ಹಾದಿಮನಿ ಸೇರಿದಂತೆ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.



