HomeGadag Newsಪರಿಸರ ಸ್ವಚ್ಛತೆ ಬಗ್ಗೆ ಜಾಗೃತಿಯಿರಲಿ : ಬಸವರಾಜ

ಪರಿಸರ ಸ್ವಚ್ಛತೆ ಬಗ್ಗೆ ಜಾಗೃತಿಯಿರಲಿ : ಬಸವರಾಜ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗದಗ, ಜಿಲ್ಲಾ ನ್ಯಾಯಾಂಗ, ಜಿಲ್ಲಾ ವಕೀಲರ ಸಂಘ, ಗದಗ, ಹಾಗೂ ನಗರಸಭೆ ಗದಗ-ಬೆಟಗೇರಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ಹಿ ಸೇವಾ-2024ರ ಸ್ವಭಾವ ಸ್ವಚ್ಛತಾ-ಸಂಸ್ಕಾರ ಸ್ವಚ್ಛತಾ ಅಭಿಯಾನದಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಬಗ್ಗೆ ಜಾಗೃತಿ ಹೊಂದುವುದು ಅವಶ್ಯಕ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಐ. ಹಿರೇಮನಿಪಾಟೀಲ ವಹಿಸಿದ್ದರು. ಅತಿಥಿಗಳಾಗಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರ ಎಸ್.ಶೆಟ್ಟಿ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಕಾಶೀಮ ಚೂರಿಖಾನ, 1ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಖಾದರಸಾಬ ಎಚ್.ಬೆನಕಟ್ಟಿ, ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್. ಶಿವನಗೌಡ್ರ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ವ ಸಿಜೆಎಂ ಜಿ.ಆರ್. ಶೆಟ್ಟರ, ಅಪರ ಹಿರಿಯ ದಿವಾಣಿ ನ್ಯಾಯಾಧೀಶರಾದ ಪದ್ಮಶ್ರೀ ಆರ್.ಪಾಟೀಲ, ಜೆಎಂಎಫ್‌ಸಿ 1ನೇ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ದೀಪ್ತಿ ನಾಡಗೌಡ, ಜೆಎಂಎಫ್‌ಸಿ 2ನೇ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ಬೀರಪ್ಪ ಕಾಂಬಳೆ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರಾದ ಮಹೇಶ ಪೋತದಾರ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಬಿ.ಎಚ್. ಮಾಡಲಗೇರಿ, ಉಪಾಧ್ಯಕ್ಷರಾದ ಅಶೋಕ ಹದ್ಲಿ, ಪರಿಸರ ಅಭಿಯಂತರರಾದ ಆನಂದ ಬದಿ, ಆರೋಗ್ಯ ನಿರೀಕ್ಷಕ ಎಂ.ಎಂ. ಮಕಾನದಾರ ಸೇರಿದಂತೆ ಪೌರಕಾರ್ಮಿಕರು, ವಕೀಲ ವೃಂದದವರು ಹಾಗೂ ನ್ಯಾಯಾಲಯ ಸಿಬ್ಬಂದಿ ಹಾಜರಿದ್ದರು.

 

LEAVE A REPLY

Please enter your comment!
Please enter your name here

E-Paper

E-paper

Must Read

spot_img