ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಾರ್ವಜನಿಕ ಸ್ಥಳಗಳು, ಶಾಲಾ-ಕಾಲೇಜುಗಳು, ಸರ್ಕಾರಿ ಕಛೇರಿಗಳು, ಉದ್ಯಾನವನಗಳಲ್ಲಿ ಸಾರ್ವಜನಿಕರು ಹಾಗೂ ಸಂಬAಧಪಟ್ಟ ಇಲಾಖೆಯವರು ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ನುಡಿದರು.

Advertisement

ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ವಕೀಲರ ಸಂಘ ಹಾಗೂ ಗದಗ-ಬೆಟಗೇರಿ ನಗರಸಭೆಯ ಸಂಯುಕ್ತಾಶ್ರಯದಲ್ಲಿ ಗದಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪುಣ್ಯತಿಥಿ ಅಂಗವಾಗಿ ಸ್ವಚ್ಛ ಭಾರತ ಅಭಿಯಾನದಡಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರ ಎಸ್.ಶೆಟ್ಟಿ, ಪ್ರಧಾನ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಖಾಶಿಮ ಚೂರಿಖಾನ್, 1ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಖಾದರಸಾಬ ಎಚ್.ಬೆನಕಟ್ಟಿ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ವ ಸಿಜೆಎಂ ಜಿ.ಆರ್. ಶೆಟ್ಟರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಸಿ.ಎಸ್. ಶಿವನಗೌಡ್ರ, ಜೆಎಂಎಫ್‌ಸಿ 1ನೇ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ದೀಪ್ತಿ ನಾಡಗೌಡ್ರ, ಜೆಎಂಎಫ್‌ಸಿ 2ನೇ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ಬೀರಪ್ಪ ಕಾಂಬಳೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಂ.ಐ. ಹಿರೇಮನಿಪಾಟೀಲ, ಉಪಾಧ್ಯಕ್ಷರಾದ ಎ.ಎಂ. ಹದ್ಲಿ, ಪ್ರಧಾನ ಕಾರ್ಯದರ್ಶಿ ಬಿ.ಎಚ್. ಮಾಡಲಗೇರಿ, ವಕೀಲರಾದ ಕೆ.ಪಿ. ಕೋಟಿಗೌಡ್ರ, ಗದಗ-ಬೆಟಗೇರಿ ನಗರಸಭೆ ಸಹಾಯಕ ಕಾರ್ಯನಿರ್ವಾಹ ಅಭಿಯಂತರರು (ಪರಿಸರ) ಆನಂದ ಬದಿ, ಆರೋಗ್ಯಾಧಿಕಾರಿ ಎಂ.ಎಂ. ಮಕಾನದಾರ, ಪೌರಕಾರ್ಮಿಕರು ಹಾಗೂ ನ್ಯಾಯಾಲಯಗಳ ಸಿಬ್ಬಂದಿಗಳು ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here