ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಇತಿಹಾಸ ಪ್ರಸಿದ್ಧ ದೂದಪೀರಾಂ ದರ್ಗಾ ಎದುರಿಗೆ ಪುರಸಭೆ ಜಾಗೆಯಲ್ಲಿ ನಿರ್ಮಿಸಲಾಗಿದ್ದ ಹತ್ತಾರು ಅಂಗಡಿಗಳನ್ನು ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದಲ್ಲಿ ಸಿಬ್ಬಂದಿಗಳು ತೆರವುಗೊಳಿಸಿದರು.
ದೂದಪೀರಾಂ ದರ್ಗಾ ಎದುರಿನಿಂದ ಶಾದಿಮಹಲ್ ಕಡೆ ತೆರಳುವ ರಸ್ತೆಯನ್ನು ಸಿಸಿ ರಸ್ತೆಯನ್ನಾಗಿ ಮಾಡಲಾಗುತ್ತಿದ್ದು, ಅಂದಾಜು 30 ಅಂಗಡಿಗಳು ಅಡ್ಡಿ ಆಗಿದ್ದವು. ಈ ಹಿನ್ನೆಲೆಯಲ್ಲಿ ಅವುಗಳನ್ನು ಅಲ್ಲಿಂದ ತೆರವುಗೊಳಿಸಿ ಸಿಸಿ ರಸ್ತೆ ನಿರ್ಮಿಸಲಾಗುವುದು ಎಂದು ಮುಖ್ಯಾಧಿಕಾರಿ ತಿಳಿಸಿದರು.
ಕೆಲವರು ಒತ್ತುವರಿ ತೆರವಿಗೆ ಕೊಂಚ ವಿರೋಧ ಮಾಡಿದರೂ ಸಹ, ಮೊದಲು ರಸ್ತೆ ಆಗಲಿ ಎಂಬ ಉದ್ದೇಶದಿಂದ ನಮ್ಮ ಅಂಗಡಿಗಳನ್ನು ತರವುಗೊಳಿಸಿ ಸಿಸಿ ರಸ್ತೆ ನಿರ್ಮಾಣಕ್ಕೆ ಅನುಕೂಲ ಮಾಡಿಕೊಟ್ಟಿದ್ದೇವೆ ಎಂದು ಅಂಗಡಿಕಾರೊಬ್ಬರು ಹೇಳಿದರು.
ಈ ವೇಳೆ ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್, ಹನಮಂತಪ್ಪ ನಂದೆಣ್ಣವರ ಸೇರಿದಂತೆ ಪೌರ ಕಾರ್ಮಿಕರು ಇದ್ದರು.



