HomeBengaluru Newsಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ಚಾಲನೆ: ₹27 ಕೋಟಿ ವೆಚ್ಚದಲ್ಲಿ 60 ದಿನ ಕಾರ್ಯಾಚರಣೆ

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ಚಾಲನೆ: ₹27 ಕೋಟಿ ವೆಚ್ಚದಲ್ಲಿ 60 ದಿನ ಕಾರ್ಯಾಚರಣೆ

For Dai;y Updates Join Our whatsapp Group

ಬೆಂಗಳೂರು: ರಾಜ್ಯದ ಮಳೆ ಕೊರತೆ ನೀಗಿಸುವ ಪ್ರಯತ್ನವಾಗಿ ಜಲಸಂಪನ್ಮೂಲ ಇಲಾಖೆ ವತಿಯಿಂದ ಮೋಡ ಬಿತ್ತನೆ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ. ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10 ಗಂಟೆಗೆ ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಾಚರಣೆಗೆ ಚಾಲನೆ ನೀಡಿದ್ದು, ಶಾಸಕ ಹೆಚ್‌.ಕೆ. ಪಾಟೀಲ್‌ ಉಪಸ್ಥಿತರಿದ್ದರು.

ಮೋಡ ಬಿತ್ತನೆ ಕಾರ್ಯಾಚರಣೆಯ ಮೇಲ್ವಿಚಾರಣೆ ಮತ್ತು ಪರಿಣಾಮದ ಮೌಲ್ಯಮಾಪನಕ್ಕಾಗಿ ನಾಲ್ಕು ಸಮಿತಿಗಳನ್ನು ರಚಿಸಲಾಗಿದೆ. ಮೇಲ್ವಿಚಾರಣಾ ಸಮಿತಿ, ತಾಂತ್ರಿಕ ಸಮಿತಿ, ಕ್ಷೇತ್ರ ಕಾರ್ಯಾಚರಣೆ ಸಮಿತಿ ಹಾಗೂ ಮೌಲ್ಯಮಾಪನ ಸಮಿತಿಗಳು ಕಾರ್ಯನಿರ್ವಹಿಸಲಿವೆ.

ತಾಂತ್ರಿಕ ಸಮಿತಿಯಲ್ಲಿ ಐಐಟಿ, ಐಐಎಸ್‌ಸಿ ಮತ್ತು ಹವಾಮಾನ ಇಲಾಖೆಯ ತಜ್ಞರು ಇರಲಿದ್ದಾರೆ. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡಗಳ ಲಭ್ಯತೆ ಆಧರಿಸಿ ಅಗತ್ಯವಿರುವ ಪ್ರದೇಶಗಳಲ್ಲಿ ಮೋಡ ಬಿತ್ತನೆ ನಡೆಸಲಾಗುತ್ತದೆ. ಕಾರ್ಯಾಚರಣೆ ನಡೆಯುವ ಪ್ರದೇಶದ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

₹27 ಕೋಟಿ ವೆಚ್ಚದ ಈ ಯೋಜನೆಯನ್ನು 60 ದಿನಗಳ ಕಾಲ ಅನುಷ್ಠಾನಗೊಳಿಸಲಾಗುತ್ತದೆ. ಒಟ್ಟು ಸುಮಾರು 200 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸುವ ಉದ್ದೇಶ ಹೊಂದಲಾಗಿದ್ದು, ಪ್ರತಿದಿನ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಕಾರ್ಯಾಚರಣೆ ನಡೆಯಲಿದೆ.

ಈ ಹಿಂದೆ ರಾಜ್ಯದಲ್ಲಿ ಮೂರು ಬಾರಿ ಮೋಡ ಬಿತ್ತನೆ ಪ್ರಯೋಗ ನಡೆಸಲಾಗಿದ್ದು, ಶೇ.18ರಿಂದ 20ರಷ್ಟು ಯಶಸ್ಸು ದೊರೆತಿತ್ತು. ಹಿಂದಿನ ಅನುಭವದ ಆಧಾರದ ಮೇಲೆ ಈ ಬಾರಿ ಶೇ.30ರಷ್ಟು ಯಶಸ್ಸು ಸಾಧಿಸುವ ನಿರೀಕ್ಷೆಯನ್ನು ಸರ್ಕಾರ ವ್ಯಕ್ತಪಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img