HomeKarnataka Newsಮೋಡಕವಿದ ವಾತಾವರಣ: ಇಂದು ಬೆಂಗಳೂರಿನಲ್ಲಿ ಮಳೆ ಆರ್ಭಟ - ಹವಾಮಾನ ಇಲಾಖೆ

ಮೋಡಕವಿದ ವಾತಾವರಣ: ಇಂದು ಬೆಂಗಳೂರಿನಲ್ಲಿ ಮಳೆ ಆರ್ಭಟ – ಹವಾಮಾನ ಇಲಾಖೆ

For Dai;y Updates Join Our whatsapp Group

Spread the love

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ಹಿತವಾದ ಗಾಳಿ ಬೀಸುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಧಾರವಾಡ, ಬೀದರ್​, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ. ಬೆಂಗಳೂರು ನಗರ, ಹಿರೆಕೆರೂರು, ಕುಶಾಲನಗರ, ಹಾರಂಗಿ, ಭಾಗಮಂಡಲ, ನಾಪೋಕ್ಲು, ಎಂಎಂ ಹಿಲ್ಸ್​, ಶೃಂಗೇರಿ, ಬಂಡೀಪುರ, ಕೆಆರ್ ನಗರ, ಹೆಸರಘಟ್ಟ, ಕಳಸ, ಬೇಗೂರು, ಆಗುಂಬೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಮಳೆಯಾಗಿದೆ, ಇಂದು ಕೂಡ ಮೋಡಕವಿದ ವಾತಾವರಣ ಮುಂದುವರೆಯಲಿದೆ. ಎಚ್​ಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,

21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!