ಬೆಂಗಳೂರು: ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳು ಪ್ರವಾಹ ಹೊಡೆತಕ್ಕೆ ಪರದಾಡುವಂತಾಗಿದೆ. ಸಿಎಂ ಸಿದ್ದರಾಮಯ್ಯ ಪ್ರವಾಹ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ,
ಬಳಿಕ ವಿಮಾನ ನಿಲ್ದಾಣದಲ್ಲೇ ನಾಲ್ಕು ಜಿಲ್ಲೆಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು. ನಂತರ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆಗೆ ತೆರಳಿದರು.
ಈ ವೇಳೆ ನಾಲ್ಕು ಜಿಲ್ಲೆಗಳ ಹನ್ನೊಂದು ಪಾಯಿಂಟ್‌ನಲ್ಲಿ ಸಮೀಕ್ಷೆ ನಡೆಸಿದರು. ಸಿಎಂ ಜೊತೆ ವೈಮಾನಿಕ ಸಮೀಕ್ಷೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಹಾಗೂ ಎಂ.ಬಿ ಪಾಟೀಲ್, ಶರಣಪ್ರಕಾಶ್ ಪಾಟೀಲ್ ಭಾಗಿಯಾಗಿದ್ದರು.
ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಮಾಡಿದ್ದಾರೆ. ಇಷ್ಟೆಲ್ಲ ಸಂಕಷ್ಟದಲ್ಲಿ ಜನರು ಸಿಲುಕಿರುವಾಗ ರಾಜಕೀಯ ನಾಯಕರ ನಡುವೆ ವಾಗ್ಯುದ್ಧ ನಡೆಯುತ್ತಿದ್ದು, ಆರೋಪ ಪ್ರತ್ಯಾರೋಪಗಳ ಸುರಿಮಳೆಯೇ ಆಗುತ್ತಿದೆ.