ನಾಳೆ ದೆಹಲಿಗೆ CM- DCM ದೌಡು: ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್ ಆಗುತ್ತಾ.?

0
Spread the love

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ನಾಳೆ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದೆ. ನಂತರ ಸಂಪುಟ ಬದಲಾವಣೆ ಅಥವಾ ಕೆಲವು ಸಚಿವರ ಖಾತೆ ಅದಲು ಬದಲು ಮಾಡುವ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎನ್ನಲಾಗಿದೆ.

Advertisement

ಸಚಿವರ ಖಾತೆ ಅದಲು ಬದಲು ಮಾಡುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ ನಡೆದಿದೆ. ಕೆಲವು ಹಿರಿಯ ಸಚಿವರಿಂದಲೂ ಖಾತೆ ಬದಲಾವಣೆಗೆ ಸಲಹೆ ಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಬಿ. ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಖಾತೆ ಕೂಡ ಸದ್ಯ ಸಿಎಂ ಬಳಿಯೇ ಇದೆ. ಇದಲ್ಲದೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಯನ್ನು ಬೇರೊಬ್ಬ ಸಚಿವರಿಗೆ ಹಂಚಿಕೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

 


Spread the love

LEAVE A REPLY

Please enter your comment!
Please enter your name here