HomePolitics Newsಹೈವೋಲ್ಟೇಜ್ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ CM-DCM ಮುಖಾಮುಖಿ!

ಹೈವೋಲ್ಟೇಜ್ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ CM-DCM ಮುಖಾಮುಖಿ!

For Dai;y Updates Join Our whatsapp Group

Spread the love

ನವದೆಹಲಿ: ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಕಾಂಗ್ರೆಸ್ ನಾಯಕತ್ವ ವಿಚಾರ ಇದೀಗ ನಿರ್ಣಾಯಕ ಹಂತ ತಲುಪಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಇಂದು ಮಹತ್ವದ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ.

ಮುಖ್ಯಮಂತ್ರಿ ಕುರ್ಚಿಗೆ ಸಂಬಂಧಿಸಿದ ಅಂತಿಮ ಹಂತದ ಚರ್ಚೆಗಳು ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಆರಂಭವಾಗಿದ್ದು, ರಾಜ್ಯದ ರಾಜಕೀಯ ವಲಯದ ಸಂಪೂರ್ಣ ಗಮನ ದೆಹಲಿಯತ್ತ ನೆಟ್ಟಿದೆ.

ಹೈವೋಲ್ಟೇಜ್ ಸಭೆಗೆ ಮುನ್ನ ಎಐಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರಸ್ಪರ ಮುಖಾಮುಖಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರೊಂದಿಗಿನ ಮಹತ್ವದ ಭೇಟಿಗೂ ಮುನ್ನ ಇಬ್ಬರು ನಾಯಕರು ನಡೆಸಿದ ಈ ಚರ್ಚೆ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಇಂದು ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಮೂರು ಹಂತದ ಮಹತ್ವದ ಸಭೆಗಳು ನಡೆಯಲಿವೆ ಎಂದು ತಿಳಿದುಬಂದಿದೆ. ಮೊದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಪ್ರತ್ಯೇಕವಾಗಿ ಸಭೆ ನಡೆಸಿ ಅಭಿಪ್ರಾಯ ಆಲಿಸಲಿದ್ದಾರೆ.

ಅದರ ಬಳಿಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಒನ್-ಟು-ಒನ್ ಸಭೆಗೆ ಆಹ್ವಾನಿಸಿ ನಾಯಕತ್ವ, ಸಂಪುಟ ಪುನರ್‌ರಚನೆ ಹಾಗೂ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.

ಮೊದಲ ಎರಡು ಹಂತದ ಸಭೆಗಳಲ್ಲಿ ಸಿಎಂ ಹಾಗೂ ಡಿಸಿಎಂ ವ್ಯಕ್ತಪಡಿಸುವ ಅಭಿಪ್ರಾಯಗಳ ಆಧಾರದ ಮೇಲೆ ಮೂರನೇ ಹಂತದ ಸಭೆ ನಡೆಯಲಿದ್ದು, ಅಗತ್ಯವಿದ್ದರೆ ಇಬ್ಬರು ನಾಯಕರನ್ನೂ ಒಟ್ಟಿಗೆ ಕೂರಿಸಿ ಹೈಕಮಾಂಡ್ ಅಂತಿಮ ಸಂಧಾನ ಸೂತ್ರದ ಬಗ್ಗೆ ಚರ್ಚೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

ವಿಶೇಷವೆಂದರೆ, ಬೆಳಿಗ್ಗೆ ಇಬ್ಬರೂ ನಾಯಕರು ಕರ್ನಾಟಕ ಭವನದಲ್ಲಿದ್ದರೂ ಪರಸ್ಪರ ಭೇಟಿಯಾಗಿರಲಿಲ್ಲ. ಆದರೆ ಬಳಿಕ ಎಐಸಿಸಿ ಕಚೇರಿಯಲ್ಲಿ ಮುಖಾಮುಖಿಯಾಗಿ ಮಾತುಕತೆ ನಡೆಸಿರುವುದು ಕಾಂಗ್ರೆಸ್ ಒಳರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!