HomeKarnataka Newsಅಮಾನತುಗೊಂಡ ಪೇದೆಗೆ ಸಿಎಂ ಪದಕ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ!

ಅಮಾನತುಗೊಂಡ ಪೇದೆಗೆ ಸಿಎಂ ಪದಕ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ!

For Dai;y Updates Join Our whatsapp Group

Spread the love

ಬೆಂಗಳೂರು:- ಅಮಾನತುಗೊಂಡ ಪೇದೆಗೆ ಸಿಎಂ ಪದಕ ಸಿಕ್ಕಿರುವ ಹಿನ್ನೆಲೆ, ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿಕಾರಿದ್ದಾರೆ.

ಸಮಾಜಘಾತುಕತನ ಹಾಗೂ ದೇಶದ್ರೋಹಿ ಮನಸ್ಥಿತಿಯ ಪೊಲೀಸ್ ಪೇದೆಯೊಬ್ಬರ ಹೆಸರು ಮುಖ್ಯಮಂತ್ರಿಗಳ ಪದಕ ಪಟ್ಟಿಯಲ್ಲಿ ಪ್ರಕಟವಾಗಿರುವುದು ಗೃಹ ಇಲಾಖೆ ಅಧಃಪತನಕ್ಕೀಡಾಗಿರುವುದಕ್ಕೆ ನಿದರ್ಶನವಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೆಲ ನಾಮಧೇಯಗಳನ್ನು ಕಂಡರೆ ಈ ಕಾಂಗ್ರೆಸ್ ಸರ್ಕಾರ ಕಣ್ಣು ಮುಚ್ಚಿಕೊಳ್ಳುತ್ತದೆ. ಅಪರಾಧಿಯಾಗಿದ್ದರೂ ಸರಿ, ಕಳ್ಳರಾಗಿದ್ದರೂ ಸರಿ, ಕೊನೆಗೆ ಭಯೋತ್ಪಾದಕರಾದರೂ ಸರಿ, ಅವರ ಬಗೆಗಿನ ಕಾಳಜಿಯಲ್ಲಿ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎನ್ನುವುದನ್ನು ಸಾಬೀತುಪಡಿಸುವ ರೀತಿಯಲ್ಲಿ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೊಡಮಾಡುವ “ಮುಖ್ಯಮಂತ್ರಿಗಳ ಪದಕ” ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಿಗೊಳಗಾದ ಪೊಲೀಸ್ ಪೇದೆಯೊಬ್ಬರ ಹೆಸರು ಪ್ರಕಟವಾಗಿದೆ.

ಸಲೀಂ ಪಾಷಾ ಎಂಬ ಪೇದೆ ಪದಕ ಪಟ್ಟಿಗೆ ಸೇರ್ಪಡೆಗೊಂಡ ಅದೃಷ್ಟವಂತನಾಗಿದ್ದು, ಅಪರಾಧಿಗಳೊಂದಿಗೆ ಕೈಜೋಡಿಸಿ ಕಳ್ಳತನಗಳಿಗೆ ನೆರವಾಗುತ್ತಿದ್ದ ಹಾಗೂ ಇಲಾಖೆಯ ದಾಖಲೆಗಳನ್ನು ಸೋರಿಕೆ ಮಾಡುವ ವಿದ್ರೋಹ ಕೃತ್ಯದ ಆರೋಪದ ಮೇಲೆ ಅಮಾನತಿಗೊಳಗಾಗಿದ್ದುದ್ದೇ ಈತನ ಅರ್ಹತೆಯಾಗಿರುವಂತಿದೆ ಎಂದು ಕಿಡಿಕಾರಿದ್ದಾರೆ.

ಪೊಲೀಸ್ ಇಲಾಖೆಯು ಶಿಸ್ತು ಹಾಗೂ ಪಾರದರ್ಶಕತೆಯ ವ್ಯಾಪ್ತಿಯ ಪರಿಧಿಯ ಸಮತೋಲನವನ್ನು ಕಾಯ್ದುಕೊಳ್ಳದೇ ಇರುವುದನ್ನು ಬಿಜೆಪಿ ಎಚ್ಚರಿಸುತ್ತಲೇ ಇತ್ತು. ಅದು ನಿಜ ಎನ್ನುವುದನ್ನು ದುಷ್ಕೃತ್ಯಗಳ ಆರೋಪದ ಮೇಲೆ ಅಮಾನತಿಗೊಳಗಾಗಿದ್ದ ಪೊಲೀಸ್ ಪೇದೆ ಸಲೀಂ ಪಾಷಾಗೆ ಪದಕ ಪ್ರಕಟವಾಗಿರುವುದು ಸಾಕ್ಷೀಕರಿಸಿದೆ ಎಂದು ವಾಗ್ದಾಳಿ ಮಾಡಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!