ಕಬ್ಬಿನ ದರ ನಿಗದಿ ಪಡಿಸಲು ತಕ್ಷಣ ಸಿಎಂ ಮಧ್ಯ ಪ್ರವೇಶಿಸಲಿ: ಬೊಮ್ಮಾಯಿ ಆಗ್ರಹ

0
A pro-development budget by a developed India
Spread the love

ಬೆಂಗಳೂರು: ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆಯಂತೆ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನೀಡಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಮಧ್ಗ ಪ್ರವೇಶ ಮಾಡಬೇಕು. ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ ಟನ್ ಕಬ್ಬಿಗೆ 3300 ರೂ. ಹಾಗೂ ರಾಜ್ಯ ಸರ್ಕಾರ 200. ರೂ. ನೀಡಿ, ರೈತರ ಬೇಡಿಕೆ ಈಡೇರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಕಬ್ಬು ಬೆಳೆಗಾರರು ನ್ಯಾಯ ಸಮ್ಮತ ಬೆಲೆ ನಿಗದಿ ಆಗಬೇಕೆಂದು ಏಳನೇ ದಿನ ಹೋರಾಟ ಮಾಡುತ್ತಿದ್ದಾರೆ. ವ್ಯಾಪಕ ಹೋರಾಟ ಆಗುತ್ತಿದೆ. ನಾನು ಈಗಾಗಲೇ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿ ಮಾಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದೇನೆ. ಆದರೆ, ಸಿಎಂ ರೈತರ ಬಗ್ಗೆ ಅಸಡ್ಡೆ ಭಾವನೆ ವ್ಯಕ್ತಪಡಿಸಿ ತಮ್ಮ ರಾಜಕಾರಣವನ್ನು ಸಿಎಂ ಸ್ಥಾನ ಉಳಿಸಿಕೊಳ್ಳಲು ಸಮಯ ಸಿಗುತ್ತಿಲ್ಲ ಹೀಗಾಗಿ ರೈತರ ಸಮಸ್ಯೆ ಪರಿಹರಿಸಲು ಅವರಿಗೆ ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ರೈತರ ಕಬ್ಬು ಬೆಳೆಗಾರರ ಸಮಸ್ಯೆ ಪ್ರತಿ ವರ್ಷ ಆಗುತ್ತಿರುವುದು ಗಮನಾರ್ಹ. ಕೇಂದ್ರ ಸರ್ಕಾರ ಎಫ್ ಆರ್ ಪಿ ನಿಗದಿ ಮಾಡಿದ ನಂತರ ಸಕ್ಕರೆ ಕಾರ್ಖಾನೆಗಳು ಎಥೆನಾಲ್, ವಿದ್ಯುತ್ ಸೆರಿದಂತೆ ಇತರೆ ಉಪ ಉತ್ಪನ್ನ ತಯಾರಿಸುತ್ತಾರೆ. ಹೀಗಾಗಿ ರೈತರು ಕೇಳುವ ದರವನ್ನು ನೀಡಲು ಸಾಧ್ಯವಿದೆ. ರಾಜ್ಯ ಸರ್ಕಾರ ಕಬ್ಬಿನ ದರವನ್ನು ನಿಗದಿ ಮಾಡಬೇಕು. ರಾಜ್ಯ ಸರ್ಕಾರಕ್ಕೆ ಕಾನೂ‌ನು ಪ್ರಕಾರ ದರ ನಿಗದಿ ಮಾಡಲು ಅಧಿಕಾರ ಇದೆ. ರೈತರ ಬೇಡಿಕೆ ತಕ್ಕಂತೆ ದರ ನಿಗದಿ ಮಾಡಿ ಸರ್ಕಾರ ಆದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರ ಎರಡು ರೀತಿಯಲ್ಲಿ ಪರಿಹಾರ ಕೊಡಬಹುದು ಸುಮಾರು 27 ಸಾವಿರ ಕೊಟಿ ರೂ. ಸರ್ಕಾರಕ್ಕೆ ಸಕ್ಕರೆ ಹಾಗೂ ಇತರ ಉಪ ಉತ್ಪನ್ನಗಳ ಮೂಲಕ ಆದಾಯ ಬರುತ್ತದೆ. ಇದರಲ್ಲಿ ಸರ್ಕಾರ ಪ್ರತಿ ಟನ್ ಗೆ 200 ರೂಪಾಯಿ ಕೊಡಬೇಕು. ಸಕ್ಕರೆ ಕಾರ್ಖಾನೆ ಮಾಲಿಕರು ಪ್ರತಿ ಟನ್ ಕಬ್ಬಿಗೆ 3300 ರೂ. ಕೊಡಲು ಮುಂದೆ ಬರಬೇಕು. ಇದರಿಂದ ರೈತರಿಗೆ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನೀಡಲು ಸಾಧ್ಯವಾಗುತ್ತದೆ.

ಎರಡನೇಯದಾಗಿ ಸಕ್ಕರೆಯ ಜೊತೆಗೆ ವಿದ್ಯುತ್ ಉತ್ಪಾದನೆಯಾಗುತ್ತದೆ. ಮಹಾರಾಷ್ಟ್ರದಲ್ಲಿ ಸಕ್ಕರೆ ಕಾರ್ಖಾನೆ ಮಾಲಿಕರೊಂದಿಗೆ ಪಿಪಿಎ ಅಗ್ರಿಮೆಂಟ್ ಆಗಿದೆ. ಅಲ್ಲಿ ಕಾರ್ಖಾನೆ ಮಾಲೀಕರಿಗೆ ಪ್ರತಿ ಯುನಿಟ್ ಗೆ 5.5 ರೂ. ಸಿಗುತ್ತದೆ. ಅದೇ ರೀತಿ ರಾಜ್ಯದಲ್ಲಿ ಒಪ್ಪಂದ ಮಾಡಿಕೊಂಡರೆ ಈಗ ನೀಡುತ್ತಿರುವ ಪ್ರತಿ ಯುನಿಟ್ ಗೆ 3 ರೂ ಬದಲು 5.5 ರೂ. ದೊರೆಯುತ್ತದೆ.

ಇದರಿಂದ ಕಬ್ಬಿಗೆ ಹೆಚ್ಚಿಗೆ ದರ ಕೊಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನಗಿರುವ ಅಧಿಕಾರ ಚಲಾವಣೆ ಮಾಡಿ, ಕಬ್ಬಿನ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಿ ದರ ಪಟ್ಟಿಯನ್ನು ರೈತರ ನ್ಯಾಯ ಸಮ್ಮತ ಬೇಡಿಕೆಯಂತೆ 3500 ರಿಂದ ದರ ಪಟ್ಟಿ ನಿಗದಿ ಮಾಡಬೇಕು. ಇಲ್ಲದಿದ್ಧರೆ ರೈತರ ಕಟ್ಟೆ ಒಡೆದರೆ ರಾಜ್ಯದ ರೈತರ ಮೇಲೆ ದೊಡ್ಡ ಪರಿಣಾಮ ಬಿರುತ್ತದೆ. ಅದು ಅತ್ಯಂತ ದುರದೃಷ್ಟ ಕರ ವಿಳಂಬ ಮಾಡದೇ ಸರ್ಕಾರ ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here