ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತೀವ್ರ ಮಂಡಿ ನೋವು ಇರುವ ಹಿನ್ನೆಲೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ.
Advertisement
ಎಸ್, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ. ಹೀಗಾಗಿ ಬೆಂಗಳೂರಿನ ಮಣಿಪಾಲ್ನ ಆಸ್ಪತ್ರೆಗೆ ದಾಖಲಾಗಿದ್ದು, ಡಾ.ಸತ್ಯನಾರಾಯಣ ಅವರು ಟ್ರೀಟ್ಮೆಂಟ್ ನೀಡ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಅವರಿಗೆ ಲೆಗ್ಮೆಂಟ್ ಶಸ್ತ್ರ ಚಿಕಿತ್ಸೆಗೊಳಗಾಗಿದ್ದರು. ಇದೀಗ ಅದೇ ಜಾಗದಲ್ಲಿ ಮತ್ತೆ ನೋವು ಕಾಣಿಸಿಕೊಂಡಿದೆ. ಆದರೆ ಬೇರೆಯಾವ ಸಮಸ್ಯೆಯೂ ಇಲ್ಲ ಎಂದು ವೈದ್ಯರು ಹೆಳಿದ್ದಾರೆ.
ಸದ್ಯ ಸಿದ್ದರಾಮಯ್ಯ ಅವರಿಗೆ ಎರಡು ದಿನ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದು, ಎಲ್ಲಿಯೂ ಪ್ರಯಾಣ ಮಾಡದಂತೆ ಸೂಚಿಸಿದ್ದು, ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರ ಎರಡು ದಿನಗಳ ಪ್ರವಾಸವನ್ನು ರದ್ದುಗೊಳಿಸಲಾಗಿದೆ.