ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಾಂಕ ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು,
Advertisement
ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇವತ್ತು ಕೂಡ ಸಭೆ ಮಾಡಿದ್ದೀನಿ. ಕರ್ನಾಟಕ ಸರ್ಕಾರ ಯಾವಾಗಲೂ ರೈತರ ಹಿತ ಕಾಪಾಡಲು ಹಿಂದೆ ಬಿದ್ದಿಲ್ಲ. ಯಾವತ್ತೂ ಕೂಡ ರೈತರ ಜೊತೆ ಇರುತ್ತೇವೆ. ಕೃಷಿಕರ ಜೊತೆ ಇರುತ್ತೇವೆ ಎಂಬ ಮಾತು ಕೊಡುತ್ತೇನೆ. ಬೆಲೆ ಏರಿಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಧಾರ. ರಾಜ್ಯ ಸರ್ಕಾರದಿಂದ ಬೆಲೆ ಏರಿಕೆಗೆ ಏನೆಲ್ಲಾ ಮಾಡಬೇಕು ಅದನ್ನ ಮಾಡುತ್ತೇವೆ ಎಂದು ಹೇಳಿದರು.