ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ 

0
Spread the love

ಬೆಂಗಳೂರು: ವೃಕ್ಷಮಾತೆ, ರಸ್ತೆ ಬದಿಯಲ್ಲಿ ಮರಗಳನ್ನು ನೆಡುತ್ತಲೇ ಖ್ಯಾತಿಯಾಗಿದ್ದ ಸಾಲುಮರದ ತಿಮ್ಮಕ್ಕ  ಕೊನೆಯುಸಿರೆಳೆದಿದ್ದಾರೆ. ಇನ್ನೂ ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು,

Advertisement

ಸಾಲುಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ.

ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು. ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು” ಎಂದು ಹೇಳಿದ್ದಾರೆ.

ಸಾಲುಮರದ ತಿಮ್ಮಕ್ಕ ಅವರಿಗೆ ಮಕ್ಕಳಿರಲಿಲ್ಲ. ರಸ್ತೆ ಬದಿಯಲ್ಲಿ ಕಿಲೋಮೀಟರ್ ಗಟ್ಟಲೇ ಗಿಡಗಳನ್ನು ನೆಟ್ಟಿ ನಿತ್ಯ ನೀರು ಹಾಕಿ ಮರಗಳಾಗುವಂತೆ ಬೆಳೆಸಿದ್ದರು. ಮರಗಳನ್ನೇ ಮಕ್ಕಳಂತೆ ನೋಡಿಕೊಂಡಿದ್ದರು. ಇದರಿಂದಾಗಿ ತಿಮ್ಮಕ್ಕ ಅವರಿಗೆ ಸಾಲುಮರದ ತಿಮ್ಮಕ್ಕ ಎಂಬ ಅನ್ವರ್ಥನಾಮವೇ ಬಂದಿತ್ತು.

ಸಾಲುಮರದ ತಿಮ್ಮಕ್ಕ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು. ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪುರಸ್ಕಾರ ಪಡೆದಾಗ ಆಗಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರನ್ನು ಆಶೀರ್ವದಿಸಿದ್ದರು.


Spread the love

LEAVE A REPLY

Please enter your comment!
Please enter your name here