HomeKarnataka Newsಪ್ರತಿಷ್ಠಿತ ಬೂಕರ್ ಪ್ರಶಸ್ತಿ ಪಡೆದ ಲೇಖಕಿ ಬಾನು ಮುಷ್ತಾಕ್ʼಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ!

ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಪಡೆದ ಲೇಖಕಿ ಬಾನು ಮುಷ್ತಾಕ್ʼಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ!

For Dai;y Updates Join Our whatsapp Group

Spread the love

ಬೆಂಗಳೂರು: ಕನ್ನಡ ಹಿರಿಯ ಸಾಹಿತಿ ಬಾನು ಮುಷ್ತಾಕ್​​ ಅವರು ಸಾಮಾಜಿಕ ಕಾರ್ಯಕರ್ತೆ, ಮಹಿಳಾಪರ ಹೋರಾಟಗಾರ್ತಿ, ಪ್ರಗತಿಪರ ಚಿಂತಕಿ, ಪತ್ರಕರ್ತೆಯಾಗಿ ಗಮನ ಸೆಳೆದವರು. ಸಾಹಿತ್ಯ ಕ್ಷೇತ್ರಕ್ಕೂ ಧುಮುಕಿ ಅದ್ಭುತ ಸಾಧನೆ ಮಾಡಿದ್ದಾರೆ. ಇದೀಗ ಅವರ “ಹಸೀನಾ ಮತ್ತು ಇತರೆ ಕತೆಗಳು” ಕೃತಿಯ ಇಂಗ್ಲಿಷ್ ಅನುವಾದಕ್ಕೆ ಬೂಕರ್ ಪ್ರಶಸ್ತಿ ಲಭಿಸಿದೆ.

ಇನ್ನೂ ಬಾನು ಮುಷ್ತಾಕ್ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು. ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಷ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ.

ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ. ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ `ಹೃದಯ ದೀಪ’ವನ್ನು ಇಂಗ್ಲಿಷ್‌ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!