ತುಂಗಭದ್ರಾ ಅಣೆಕಟ್ಟೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಬಾಗಿನ ಅರ್ಪಣೆ

0
Spread the love

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್‌ ಬಹುತೇಕ ಭರ್ತಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ. ಆಗಸ್ಟ್‌‌ 12ರಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಬೇಕಿತ್ತು. ಆದರೆ ಆಗಸ್ಟ್‌ 11ರಂದು ಗೇಟ್ 19 ಕಿತ್ತೋದ ಕಾರಣಕ್ಕೆ ಬಾಗಿನ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿತ್ತು. ಈಗ ತುಂಗಭದ್ರಾ ಮತ್ತೆ ಭರ್ತಿಯಾಗಿದ್ದು, ಭಾಗಿನ ಅರ್ಪಿಸುವ ಮೂಲಕ ಮಾತಿನಂತೆ ಮುಖ್ಯಮಂತ್ರಿಗಳು ಮಾತು ಮತ್ತು ಆಶಯ ಈಡೇರಿದ ಸಂಭ್ರಮದ ಕ್ಷಣಕ್ಕೆ ಇಡೀ ರಾಜ್ಯ ಇಂದು ಸಾಕ್ಷಿಯಾಯಿತು.

Advertisement

ಇನ್ನೂ ಜಲ ಸಂಪನ್ಮೂಲ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿರಾಜ್ ತಂಗಡಗಿ, ಸಚಿವರುಗಳಾದ ಬೋಸ್ ರಾಜ್, ಶರಣಪ್ರಕಾಶ್ ಪಾಟೀಲ್, ಕೊಪ್ಪಳ ಸಂಸದರಾದ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಮ್ ಹಾಗೂ ಎರಡೂ ಜಿಲ್ಲೆಗಳ ಶಾಸಕರುಗಳು, ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here