ಬೆಳಗಾವಿ: ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಸಿಎಂ ಸಿದ್ದರಾಮಯ್ಯಗೆ ಸಲ್ಲುತ್ತದೆ ಎಂದು ರಾಜ್ಯ ಬಜೆಟ್ ಬಗ್ಗೆ ಎಂಎಲ್‌ಸಿ ಸಿ.ಟಿ.ರವಿ ವ್ಯಂಗ್ಯವಾಗಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು 16ನೇ ದಾಖಲೆ ಬಜೆಟ್ ಮಂಡಿಸಿದ್ದಾರೆ. ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಸಿಎಂ ಸಿದ್ದರಾಮಯ್ಯಗೆ ಸಲ್ಲುತ್ತದೆ.
Advertisement
ಈವರೆಗಿನ ಸಿಎಂ ಮಾಡಿದ ಸಾಲಕ್ಕಿಂತಲೂ ಹೆಚ್ಚಿನ ಸಾಲ ಮಾಡಿದ್ದಾರೆ. 4 ಲಕ್ಷ ಕೋಟಿ ಅಷ್ಟು ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿ ಸಾಲ 1.27 ಲಕ್ಷ ಕೋಟಿ. ಮೂಲಸೌಕರ್ಯ ಯೋಜನೆಗಳಿಗೆ ಉತ್ತೇಜನ ಕೊಟ್ಟಿದ್ದರೆ ತೆರಿಗೆ ಸಂಗ್ರಹ ಆಗ್ತಿತ್ತು.
ಕಳೆದ ವರ್ಷ 3.22 ಲಕ್ಷ ಕೋಟಿ ಖರ್ಚು ಮಾಡ್ತೇವಿ ಅಂತಾ ಹೇಳಿದ್ರು. ಇದುವರೆಗೂ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ಶೇ.55 ರಷ್ಟು ಖರ್ಚು ಮಾಡಿದ್ದಾರೆ. ಇನ್ನುಳಿದ 45 ದಿನದಲ್ಲಿ ಉಳಿದ 45 ರಷ್ಟು ಖರ್ಚು ಮಾಡಲು ಸಾಧ್ಯವಾಯ್ತು ಎಂದು ಬೇಸರ ಹೊರಹಾಕಿದ್ದಾರೆ.