ಬೆಂಗಳೂರು: ಭಾರೀ ಕುತೂಹಲಕ್ಕೆ ಕಾರಣವಾಗಿರುವ ಒಳಮೀಸಲಾತಿ ವರದಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆಯಾಗಿದೆ. ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗ ತನ್ನ ವರದಿಯನ್ನು ನೀಡಿದೆ.
Advertisement
ವಿಧಾನಸೌಧದಲ್ಲಿ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ 1766 ಪುಟಗಳ ವರದಿಯನ್ನು ನೀಡಿದ್ದಾರೆ. ಇದರಲ್ಲಿ ಆರು ಶಿಫಾರಸ್ಸುಗಳು ಒಳಗೊಂಡಿವೆ.ದಲಿತ ಸಮುದಾಯದ ಒಳ ಪಂಗಡಗಳಿಗೆ ಮೀಸಲಾತಿ ನೀಡುವ ನಿಟ್ಟಿನಲ್ಲಿ ಈ ವರದಿ ಮಹತ್ವದ ಪಾತ್ರ ನಿರ್ವಹಣೆ ಮಾಡಲಿದೆ.
ಒಳ ಮೀಸಲಾತಿ ಹೈಲೈಟ್ಸ್ ಏನೇನು?
- *ಒಳಮೀಸಲಾತಿ ಬೇಕೆಂದು ನ್ಯಾಯಾಲಯಗಳ ಒಳಗೆ ಮತ್ತು ಹೊರಗೆ 30 ವರ್ಷಗಳ ಹೋರಾಟ.
- ಸರ್ವೋಚ್ಚ ನ್ಯಾಯಾಲಯ ದಿನಾಂಕ 01-08-2024 ರಂದು ದವಿಂದರ್‌ಸಿಂಗ್ ಪ್ರಕರಣದ ತೀರ್ಪಿನಲ್ಲಿ ಸ್ಪಷ್ಟನೆ.
- ಉಪವರ್ಗೀಕರಣ ಮಾಡುವುದಕ್ಕೆ ಸಂವಿಧಾನದ ಅನುಚ್ಛೇದ 14 ರಲ್ಲಿ ಅವಕಾಶವಿದೆ.
- ಉಪವರ್ಗೀಕರಣ ಸಾಮಾಜಿಕ ನ್ಯಾಯದ ವಿಸ್ತರಣೆ . ರಾಜ್ಯ ಸರ್ಕಾರಕ್ಕೆ ಒಳಮೀಸಲಾತಿ ನೀಡುವ ಅಧಿಕಾರವಿದೆ.
- ಉಪವರ್ಗೀಕರಣ ಮಾಡಿದರೆ ಮೀಸಲಾತಿ ಅನುಭವಿಸುತ್ತಿರುವ ಯಾರನ್ನೂ ಹೊರಗಿಡುವುದಿಲ್ಲ.
- ಅಗತ್ಯ ದತ್ತಾಂಶ ಸಂಗ್ರಹಿಸಿ ಒಳಜಾತಿಗಳ ವರ್ಗೀಕರಣ ಮಾಡಬೇಕು ಎಂದು ಉಲ್ಲೇಖ.