ಮುಡಾ ಕೇಸ್ʼನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ʼಚಿಟ್: 11 ಸಾವಿರ ಪುಟಗಳ ತನಿಖಾ ವರದಿ ಸಲ್ಲಿಕೆ

0
Spread the love

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ವಿರುದ್ಧ ಮುಡಾ ಹಗರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಈ ಹಗರಣದ ತನಿಖೆ ನಡೆಸಿದ ಮೈಸೂರು ಲೋಕಾಯುಕ್ತ ಅಧಿಕಾರಿಗಳು ವರದಿ ಸಿದ್ಧಪಡಿಸಿ ಸಾಕ್ಷ್ಯಾಧಾರಗಳ ಕೊರತೆಯಿಂದ ಕ್ಲೀನ್​ಚಿಟ್ ನೀಡಿದೆ.

Advertisement

ಇನ್ನೂ ಇಂದು 82ನೇ ಸಿಟಿ ಸಿವಿಲ್ ಕೋರ್ಟ್ ನ ನ್ಯಾ.ಸಂತೋಷ್ ಗಜಾನನ ಭಟ್ ಅವರ ಮುಂದೆ 11 ಸಾವಿರ ಪುಟಗಳ ವರದಿಯನ್ನು ಸಲ್ಲಿಸಲಾಗಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

ಪೊಲೀಸರು 50ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಅಂತಿಮ ವರದಿಯನ್ನು ಪಡೆದ ನ್ಯಾಯಾಲಯ ವಿಚಾರಣೆಯನ್ನು ಫೆ. 24ಕ್ಕೆ ಮುಂದೂಡಿದೆ.

ಸದ್ಯ ಅಂತಿಮ ವರದಿ ಸಲ್ಲಿಕೆಯಾದರೂ ಪ್ರಕರಣದ ತನಿಖೆ ಇನ್ನೂ ಮುಂದುವರೆಯಲಿದೆ. ಕ್ಲೀನ್ ಚಿಟ್ ನೀಡಿದ ನಾಲ್ವರನ್ನು ಹೊರತುಪಡಿಸಿ ಉಳಿದವರ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಲಿದ್ದಾರೆ. ದೂರುದಾರ ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನಲ್ಲಿ ಯಾವುದೇ ಪುರಾವೆ ಇಲ್ಲ ಎಂದು ಲೋಕಾಯುಕ್ತ ಪೊಲೀಸರು ಸ್ಪಷ್ಟಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here